ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮಗ, ಮುಂಬೈ ಇಂಡಿಯನ್ಸ್ ಆಟಗಾರ ಅರ್ಜುನ್ ತೆಂಡೂಲ್ಕರ್‌ಗೆ ಎರಡು ದಿನದ ಹಿಂದೆ ಬೀದಿ ನಾಯಿ ಕಡಿದಿದ್ದು, ಇದೀಗ ಗುಣಮುಖರಾಗಿ ತಂಡಕ್ಕೆ ಮರಳಿದ್ದಾರೆ.

ಲಖನೌ ಸೂಪರ್ ಜೈಂಟ್ಸ್ ತನ್ನ ಟ್ವೀಟರ್ ಪೇಜ್‌ನಲ್ಲಿ ವಿಡಿಯೊ ಒಂದನ್ನು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ಅರ್ಜುನ್ ತೆಂಡೂಲ್ಕರ್ ಮತ್ತು ಯುದುವೀರ್ ಸಿಂಗ್ ಪರಸ್ಪರ ಕುಶಲೋಪರಿ ಹಂಚಿಕೊಂಡಿದ್ದಾರೆ. ಈ ವೇಳೆ ಅರ್ಜುನ್ ತೆಂಡೂಲ್ಕರ್ ನಾಯಿ ಕಡಿತಕ್ಕೆ ಒಳಗಾದ ಬಗ್ಗೆ ಹೇಳಿದ್ದಾರೆ.

ಅರ್ಜುನ್ ಆರೋಗ್ಯದ ಬಗ್ಗೆ ಅವರ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದು, ಆರೋಗ್ಯದ ಬಗ್ಗೆ ಗಮನಕೊಡುವಂತೆ ಸಲಹೆ ನೀಡಿದ್ದಾರೆ. ಇನ್ನು ಕೆಲವರು ಇದೇ ವಿಚಾರವಾಗಿ ಟ್ರೋಲ್ ಮಾಡಿದ್ದಾರೆ.

23ನೇ ವಯಸ್ಸಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅರ್ಜುನ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನು ಆಡಿದ್ದರು. ಅದಾದ ನಂತರ ಹಲವಾರು ಪಂದ್ಯಗಳಲ್ಲಿ ಆಡಿದ್ದರೂ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತೋರಿಸಿದ ಪ್ರದರ್ಶನ ಅರ್ಜುನ್ ಮೇಲೆ ಭರವಸೆ ಮೂಡಿಸಿತ್ತು.

ಇಂದು ಮುಂಬೈ ಇಂಡಿಯನ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ನಡುವೆ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.