ಮುಂಬೈ: ಕ್ರಿಕೆಟ್ ಜಗತ್ತಿನ ದಂತ ಕಥೆ ಸಚಿನ್ ತೆಂಡೂಲ್ಕರ್ ಅವರ ಮಗ ಎಡಗೈ ವೇಗದ ಬೌಲರ್ ಅರ್ಜುನ್ ತೆಂಡೂಲ್ಕರ್, ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಹರಿಯಾಣ ವಿರುದ್ಧದ ಪಂದ್ಯದಲ್ಲಿ ಮುಂಬೈ ಹಿರಿಯರ ತಂಡಕ್ಕೆ ಪದಾರ್ಪನೆ ಮಾಡಿದ್ದಾರೆ.

ಸಬರ್ಬನ್ ಬಿಕೆಸಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ಹಿರಿಯರ ತಂಡದಲ್ಲಿ ಆಡುವ ಮೂಲಕ 21 ವರ್ಷದ ಅರ್ಜುನ್ ತೆಂಡೂಲ್ಕರ್, ಐಪಿಎಲ್ ಹರಾಜಿನಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆದಿದ್ದಾರೆ.

22 ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲು ಬಿಸಿಸಿಐ ಅನುಮತಿ ಕೊಟ್ಟ ಬಳಿಕ ಮತ್ತೊಬ್ಬ ವೇಗಿ ಕೃತಿಕ್ ಅನಗವಾಡಿ ಜೊತೆ ಅರ್ಜುನ್ ತೆಂಡೂಲ್ಕರ್ ಅವರನ್ನು ಸಹ ಸಲೀಲ್ ಅಂಕೊಲಾ ನೇತೃತ್ವದ ಆಯ್ಕೆ ಸಮಿತಿ ಮುಂಬೈ ಹಿರಿಯ ತಂಡಕ್ಕೆ ಆಯ್ಕೆ ಮಾಡಿತ್ತು.

ಹಲವು ವರ್ಷಗಳಿಂದ ಅರ್ಜುನ್ ತೆಂಡೂಲ್ಕರ್ ಮುಂಬೈಗಾಗಿ ವಯೋವರ್ಗಗಳ ಮತ್ತು ಆಹ್ವಾನಿತ ಪಂದ್ಯಾವಳಿಗಳಲ್ಲೂ ಆಡಿದ್ದಾರೆ.

ಎಡಗೈ ಬೇಗಿ ಅರ್ಜುನ್ ತೆಂಡೂಲ್ಕರ್, ಅಭ್ಯಾಸದ ಸಂದರ್ಭ ಭಾರತೀಯ ರಾಷ್ಟ್ರೀಯ ತಂಡದ ಆಟಗಾರರಿಗೂ ಬೌಲ್ ಮಾಡಿದ್ದಾರೆ. 2018ರಲ್ಲಿ ಶ್ರೀಲಂಕಾಕ್ಕೆ ಪ್ರವಾಸ ಕೈಗೊಂಡಿದ್ದ ಸಂದರ್ಭ 19 ವರ್ಷದೊಳಗಿನ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.