ದುಬೈ: ಭಾರತದ ವೇಗದ ಬೌಲರ್ ಆರ್ಷದೀಪ್ ಸಿಂಗ್ ಅವರು ಐಸಿಸಿ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಅವರು ಮಾರ್ಕೊ ಜೆನ್ಸೆನ್, ಫಿನ್ ಅಲೆನ್ ಮತ್ತು ಇಬ್ರಾಹಿಂ ಜದ್ರಾನ್ ಅವರೊಂದಿಗೆ ಪೈಪೋಟಿ ನಡೆಸಲಿದ್ದಾರೆ.

ಪ್ರಶಸ್ತಿ ವಿಜೇತರ ಆಯ್ಕೆಗೆ ಜನವರಿ ತಿಂಗಳಲ್ಲಿ ಮತದಾನ ನಡೆಯಲಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.

ಮಹಿಳೆಯರ ವಿಭಾಗದಲ್ಲಿ ಭಾರತದ ವೇಗಿ ರೇಣುಕಾ ಸಿಂಗ್ ಮತ್ತು ಬ್ಯಾಟರ್ ಯಸ್ತಿಕಾ ಭಾಟಿಯಾ ಅವರು ಆಸ್ಟ್ರೇಲಿಯಾದ ಡಾರ್ಸಿ ಬ್ರೌನ್ ಹಾಗೂ ಇಂಗ್ಲೆಂಡ್ನ ಅಲೈಸ್ ಕ್ಯಾಪ್ಸಿ ಜತೆ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಸ್ಪರ್ಧೆಯಲ್ಲಿದ್ದಾರೆ.

ಆರ್ಷದೀಪ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಆರು ತಿಂಗಳಲ್ಲೇ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದು ವಿಶೇಷ.

21 ಟಿ20 ಪಂದ್ಯಗಳನ್ನು ಆಡಿರುವ ಅವರು 18.12ರ ಸರಾಸರಿಯಲ್ಲಿ 33 ವಿಕೆಟ್ಗಳನ್ನು ಪಡೆದುಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.

ಮೆಲ್ಬರ್ನ್ನಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ‘ಹೈವೋಲ್ಟೇಜ್’ ಪಂದ್ಯದಲ್ಲಿ ಅವರು ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ವಿಕೆಟ್ಗಳು ಸೇರಿದಂತೆ 32 ರನ್ಗಳಿಗೆ ಮೂರು ವಿಕೆಟ್ ಪಡೆದಿದ್ದರು.

ರೇಣುಕಾ ಸಿಂಗ್ ಅವರು ಈ ವರ್ಷ ಆಡಿದ 29 ಪಂದ್ಯಗಳಲ್ಲಿ 40 ವಿಕೆಟ್ ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.