ದುಬೈ: ಕೆಲ ಪಂದ್ಯಗಳಲ್ಲಿ ಸ್ಫೂರ್ತಿಯುತ ಪ್ರದರ್ಶನದ ಪರಿಣಾಮ ವೇಗಿ ಅರ್ಷದೀಪ್ ಸಿಂಗ್ ಅವರು ಐಸಿಸಿ ಟಿ20 ರ್ಯಾಂಕಿಂಗ್ನ ಬೌಲರ್ಗಳ ಪಟ್ಟಿಯಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ಬುಧವಾರ ಪ್ರಕಟವಾದ ಪಟ್ಟಿಯಲ್ಲಿ ಅವರು ಎಂಟನೇ ಸ್ಥಾನದಲ್ಲಿದ್ದಾರೆ.

ಗ್ವಾಲಿಯರ್ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅವರು 14 ರನ್ನಿಗೆ 3 ವಿಕೆಟ್ ಪಡೆದಿದ್ದರು. ಅವರು 642 ಪಾಯಿಂಟ್ಸ್ ಪಡೆದಿದ್ದಾರೆ. ಅವರು ಅಗ್ರ 10ರಲ್ಲಿ ಸ್ಥಾನ ಪಡೆದಿರುವ ಭಾರತದ ಏಕಮಾತ್ರ ಬೌಲರ್.

ಇಂಗ್ಲೆಂಡ್ನ ಅದಿಲ್ ರಶೀದ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ವೆಸ್ಟ್ ಇಂಡೀಸ್ನ ಅಖೀಲ್ ಹುಸೇನ್ ಮತ್ತು ಅಫ್ಗಾನಿಸ್ತಾನದ ರಶೀದ್ ಖಾಣ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ 16 ಎಸೆತಗಳಲ್ಲಿ 39 ರನ್ ಸಿಡಿಸಿದ್ದ ಹಾರ್ದಿಕ್ ಪಾಂಡ್ಯ ಬ್ಯಾಟರ್ಗಳ ಪಟ್ಟಿಯಲ್ಲಿ ಏಳುಸ್ಥಾನ ಬಡ್ತಿಪಡೆದು 60ನೇ ಸ್ಥಾನ ತಲುಪಿದ್ದಾರೆ. ಆ ಪಂದ್ಯದಲ್ಲಿ ಒಂದು ವಿಕೆಟ್ ಕೂಡ ಪಡೆದಿದ್ದ ಅವರು ಆಲ್ರೌಂಡರ್ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ನ ಲಿಯಾಮ್ ಲಿವಿಂಗ್ಸ್ಟೋನ್ ಮತ್ತು ನೇಪಾಳದ ದೀಪೇಂದ್ರ ಸಿಂಗ್ ಐರೀ ಅವರು ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.