ನವದೆಹಲಿ: ಅಥ್ಲೀಟ್ ಎಂ.ಆರ್. ಪೂವಮ್ಮ ಅವರು ಈಚೆಗೆ ಉದ್ದೀಪನ ಮದ್ದು ಸೇವನೆ ಮಾಡಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಅವರಿಗೆ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕವು ಮೂರು ತಿಂಗಳುಗಳ ನಿಷೇಧ ಶಿಕ್ಷೆ ವಿಧಿಸಿದೆ.

ಕರ್ನಾಟಕದ 32 ವರ್ಷದ ಪೂವಮ್ಮ ಅವರು ಕಳೆದ ಫೆಬ್ರುವರಿಯಲ್ಲಿ ಪಟಿಯಾಲದಲ್ಲಿ ನಡೆದಿದ್ದ ಇಂಡಿಯನ್ ಗ್ರ್ಯಾನ್ಪ್ರಿ ಕೂಟದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅವರು ಪರೀಕ್ಷೆ ನೀಡಿದ್ದ ಮಾದರಿಯಲ್ಲಿ ನಿಷೇಧಿತ ಮೆಥೈಲ್ಹೆಕ್ಸಾನೀಮೈನ್ ಮದ್ದಿನ ಅಂಶ ಇರುವುದು ಪತ್ತೆಯಾಗಿದೆ. ಈ ವಿಷಯವನ್ನು ಭಾರತ ಅಥ್ಲೆಟಿಕ್ಸ್ ಫೆಡರೇಷನ್ (ಎಎಫ್ಐ) ಅಧ್ಯಕ್ಷ ಆದಿಲೆ ಸುಮರಿವಾಲಾ ದೃಢಪಡಿಸಿದ್ದಾರೆ.

‘ಕೆಲವು ದಿನಗಳ ಹಿಂದೆಯೇ ನಿಷೇಧ ಶಿಕ್ಷೆಯ ಆದೇಶವು ಬಂದಿದೆ’ ಎಂದು ಅವರು ಹೇಳಿದ್ದಾರೆ.

ಜುಲೈ 15 ರಿಂದ 24ರವರೆಗೆ ಅಮೆರಿಕದಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಭಾಗವಹಿಸಲು ಪೂವಮ್ಮ ಅವರಿಗೆ ಸಾಧ್ಯವಾಗುವುದಿಲ್ಲ.

2018ರ ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ 4X400 ಮೀ ರಿಲೆಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿ ಪೂವಮ್ಮ ಇದ್ದರು. 2012ರ ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ 400 ಮೀಟರ್ಸ್ ಓಟದಲ್ಲಿ ಅವರು ಕಂಚಿನ ಪದಕ ಗಳಿಸಿದ್ದರು.

ಹೋದ ಏಪ್ರಿಲ್ನಲ್ಲಿ ಮಲಪ್ಪುರಂನಲ್ಲಿ ನಡೆದಿದ್ದ ಫೆಡರೇಷನ್ ಕಪ್ ಅಥ್ಲೆಟಿಕ್ಸ್ನಲ್ಲಿ ಅವರು ಬೆಳ್ಳಿ ಪದಕ ಜಯಿಸಿದ್ದರು. 52.70 ಸೆಕೆಂಡುಗಳಲ್ಲಿ ಗುರಿ ಮುಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.