ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವಣ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಹಣಾಹಣಿ ಬ್ರಿಸ್ಬೇನ್ನಲ್ಲಿ ಆರಂಭವಾಗಿದ್ದು, ಉಭಯ ತಂಡಗಳು ಗೆಲುವಿಗಾಗಿ ಶ್ರಮಿಸಲಿವೆ. ಮೊದಲ ದಿನದಾಟ ಶುಕ್ರವಾರ ಆರಂಭವಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ನಿರೀಕ್ಷೆಯಂತೆ ಮೊಹಮ್ಮದ್ ಸಿರಾಜ್ ಬೌಲಿಂಗ್ ಆರಂಭಿಸಿದ್ದು, ಡೇವಿಡ್ ವಾರ್ನರ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ನಂತರದಲ್ಲಿ ಶಾರ್ದೂಲ್ ಠಾಕೂರ್ ಮತ್ತೊಂದು ವಿಕೆಟ್ ಪಡೆದುಕೊಂಡಿದ್ದು, ವಾಷಿಂಗ್ಟನ್ ಸುಂದರ್ ಕೂಡ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ 27 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿ ಆಟವಾಡುತ್ತಿದೆ. ಪ್ರಸ್ತುತ ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲಾಬೂಶೇನ್ ಉತ್ತಮ ಜತೆಯಾಟ ಪ್ರದರ್ಶಿಸುತ್ತಿದ್ದಾರೆ.

ಸಿರಾಜ್ ಬೌಲಿಂಗ್ ಮೇಲೆ ನಿರೀಕ್ಷೆ

ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು, ಟೀಮ್ ಇಂಡಿಯಾ ಭರವಸೆಯ ಬೌಲರ್ಗಳು ಆಸಿಸ್ ತಂಡವನ್ನು ಕಟ್ಟಿಹಾಕುವ ಯತ್ನದಲ್ಲಿದ್ದಾರೆ. ಈ ಪೈಕಿ ಮೊಹಮ್ಮದ್ ಸಿರಾಜ್ ಮೇಲೆ ಟೀಮ್ ಇಂಡಿಯಾ ಹೆಚ್ಚಿನ ನಿರೀಕ್ಷೆ ಇರಿಸಿಕೊಂಡಿದೆ. ಪಂದ್ಯವನ್ನು ಉತ್ತಮ ಹಂತಕ್ಕೆ ತಂದು, 1-1 ಸಮಬಲ ಸಾಧಿಸಿರುವುದರಿಂದ ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ. ಮತ್ತೊಂದೆಡೆ ಜನಾಂಗೀಯ ನಿಂದನೆ ಮತ್ತು ಆಸ್ಟ್ರೇಲಿಯಾದಲ್ಲಿ ಉಂಟಾದ ಗಾಯಾಳುಗಳ ಸಮಸ್ಯೆಯಿಂದ ತೊಂದರೆ ಅನುಭವಿಸಿದ ಟೀಮ್ ಇಂಡಿಯಾ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಟೀಮ್ ಇಂಡಿಯಾ

ಗಾಯಾಳುಗಳ ಸಮಸ್ಯೆ ಭಾರತ ತಂಡಕ್ಕೆ ತೀವ್ರವಾಗಿ ಕಾಡುತ್ತಿದ್ದು, ಪಂದ್ಯ ನಿಭಾಯಿಸುವುದು ಕೂಡ ಸವಾಲಾಗಿ ಪರಿಣಮಿಸಿದೆ.ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಜಿಂಕ್ಯ ರಹಾನೆ, ಚೇತೇಶ್ವರ ಪೂಜಾರ, ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ರಿಷಬ್ ಪಂತ್, ಶಾರ್ದೂಲ್ ಠಾಕೂರ್ ಮತ್ತು ಟಿ ನಟರಾಜನ್ ಇದ್ದಾರೆ.

ಇದನ್ನೂ ಓದಿ:PV Web Exclusive: ಅಮ್ಮನ ನೆರಳಲ್ಲಿ ಅರಳಿದ ಹನುಮ ವಿಹಾರಿಯ ಕ್ರಿಕೆಟ್ ಕನಸು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.