ಅಡಿಲೇಡ್:ಇಲ್ಲಿನ ಓವಲ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ತಂಡದೆದುರು ನಡೆಯುತ್ತಿರುವಬಾರ್ಡರ್–ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ 323 ರನ್‌ಗಳ ಸವಾಲಿನ ಗುರಿ ನೀಡಿದೆ. ಇನ್ನೂ ಒಂದು ದಿನದ ಆಟ ಬಾಕಿ ಉಳಿದಿದ್ದು, ಉಭಯ ತಂಡಗಳಿಗೂ ಪಂದ್ಯಗೆಲ್ಲಲುಸಮಾನ ಅವಕಾಶ ಇದೆ.

ಗುರುವಾರಟಾಸ್‌ಗೆದ್ದು ಬ್ಯಾಟಿಂಗ್ ಆರಂಭಿಸಿದ್ದವಿರಾಟ್ ಕೊಹ್ಲಿ ಬಳಗ ಮೊದಲ ಇನಿಂಗ್ಸ್‌ನಲ್ಲಿ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 250 ರನ್ ಕಲೆ ಹಾಕಿತ್ತು. ಇದಕ್ಕುತ್ತರವಾಗಿ ಟಿಮ್ ಪೇನ್ ಬಳಗ 235 ರನ್‌ಗಳಿಗೆ ಆಲೌಟ್ ಆಗಿತ್ತು.ಬೌಲರ್‌ಗಳು ಮೇಲುಗೈ ಸಾಧಿಸಿದ್ದ ಇನಿಂಗ್ಸ್‌ನಲ್ಲಿ ಭಾರತ ಪರ ಚೇತೇಶ್ವರ ಪೂಜಾರ ಶತಕ(123) ಹಾಗೂ ಆಸೀಸ್ ಪರ ಟ್ರಾವಿಸ್ ಹೆಡ್ ಅರ್ಧ ಶತಕ(72) ಬಾರಿಸಿ ತಮ್ಮ ತಂಡಗಳಿಗೆ ನೆರವಾಗಿದ್ದರು.

15 ರನ್‌ಗಳ ಅಲ್ಪ ಮುನ್ನಡೆ ಪಡೆದು ಬ್ಯಾಟಿಂಗ್ ಆರಂಭಿಸಿದ ಭಾರತ ಎರಡನೇ ಇನಿಂಗ್ಸ್‌ನಲ್ಲಿ 307 ರನ್‌ಗಳಿಸಿ ಆಲೌಟ್ ಆಗಿದೆ. ಅನುಭವಿ ಆಟಗಾರ ಪೂಜಾರ(71) ಹಾಗೂ ಉಪನಾಯಕ ಅಜಿಂಕ್ಯಾ ರಹಾನೆ(70) ಅರ್ಧ ಶತಕ ಗಳಿಸಿ ನೆರವಾದರು.ಆಸಿಸ್ ಪರ ಭರ್ತಿ 42 ಓವರ್ ಎಸೆದಸ್ಪಿನ್ನರ್ ನೇಥನ್ ಲಿಯೊನ್ 122 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಮೂರು ವಿಕೆಟ್ ಪಡೆದ ವೇಗಿಮಿಚೇಲ್ ಸ್ಟಾರ್ಕ್‌ಲಿಯೊನ್‌ಗೆ ಉತ್ತಮ ಬೆಂಬಲ ನೀಡಿದರು.

ಸದ್ಯ ಎರಡನೇ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ 5 ಓವರ್‌ಗಳ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 7 ರನ್ ಗಳಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ಸೊನ್ನೆ ಸುತ್ತಿದ್ದ ಆ್ಯರೋನ್ ಫಿಂಚ್(4) ಮತ್ತು ಮಾರ್ಕಸ್ ಹ್ಯಾರಿಸ್(2) ಕ್ರೀಸ್‌ನಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.