ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಈ ಬಾರಿಯ ಐಪಿಎಲ್ ಉದ್ಘಾಟನಾ ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಅಜೇಯ 14 ರನ್ ಗಳಿಸಿದರು. ಕೇವಲ 7 ಎಸೆತಗಳನ್ನು ಎದುರಿಸಿದ ಅವರು ತಲಾ ಒಂದು ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದರು. ಆ ಮೂಲಕ ಐಪಿಎಲ್ನಲ್ಲಿ ಒಂದೇ ತಂಡದ ಪರ 200 ಸಿಕ್ಸರ್ ಸಿಡಿಸಿದ ಐದನೇ ಬ್ಯಾಟರ್ ಎಂಬ ಶ್ರೇಯಕ್ಕೆ ಭಾಜನರಾದರು.

ಈ ವರೆಗೆ 235 ಪಂದ್ಯಗಳ 207 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಧೋನಿ, ಬರೋಬ್ಬರಿ 230 ಸಿಕ್ಸರ್ ಸಿಡಿಸಿದ್ದಾರೆ. ಈ ಪೈಕಿ 200 ಸಿಕ್ಸರ್ಗಳನ್ನು ಅವರು ಸಿಎಸ್ಕೆ ಪರ ಬಾರಿಸಿದ್ದಾರೆ.

ಒಂದೇ ತಂಡದ ಪರ ಹೆಚ್ಚು ಸಿಕ್ಸರ್ ಗಳಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವೆಸ್ಟ್ಇಂಡೀಸ್ನ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ ಅಗ್ರ ಸ್ಥಾನದಲ್ಲಿದ್ದಾರೆ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಪರ 239 ಸಿಕ್ಸರ್ ಗಳಿಸಿದ್ದಾರೆ. ಇದೇ ತಂಡದ ಪರ 238 ಸಿಕ್ಸರ್ ಹೊಡೆದಿರುವ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್ ನಂತರದ ಸ್ಥಾನದಲ್ಲಿದ್ದಾರೆ.

ಮುಂಬೈ ಇಂಡಿಯನ್ಸ್ ಪರ 223 ಸಿಕ್ಸರ್ ಗಳಿಸಿರುವ ವಿಂಡೀಸ್ ಬ್ಯಾಟರ್ ಕೀರನ್ ಪೊಲಾರ್ಡ್ ಮೂರನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ರನ್ ಯಂತ್ರ ವಿರಾಟ್ ಕೊಹ್ಲಿ ಇದ್ದು, ಅವರು ಆರ್ಸಿಬಿ ಪರ 218 ಸಿಕ್ಸರ್ ಚಚ್ಚಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.