ಕೋಲ್ಕತ್ತ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಅವರನ್ನು ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಂಗಳವಾರ ರಾತ್ರಿಯಿಂದಲೇ ಅವರು ಅಸ್ವಸ್ಥಗೊಂಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಹೃದಯಾಘಾತದ ಸೌಮ್ಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿಇತ್ತೀಚೆಗಷ್ಟೇಆಸ್ಪತ್ರೆಗೆ ದಾಖಲಾಗಿದ್ದ ಗಂಗೂಲಿ ಅವರು ಬಳಿಕ ಗುಣಮುಖರಾಗಿ ಬಿಡುಗಡೆಯಾಗಿದ್ದರು.

ಓದಿ:'ಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ'; ಆಸ್ಪತ್ರೆಯಿಂದ ಬಿಡುಗಡೆಗೊಂಡ ಸೌರವ್ ಗಂಗೂಲಿ

ಓದಿ:ಈಗಲಾದರೂ ಪೂಜಾರ, ಪಂತ್, ಅಶ್ವಿನ್ ಮಹತ್ವವನ್ನು ಮನಗಾಣುವಿರಿ: ಸೌರವ್ ಗಂಗೂಲಿ

48 ವರ್ಷ ವಯಸ್ಸಿನ ಸೌರವ್ ಗಂಗೂಲಿ ಅವರಿಗೆ ಜನವರಿ 2 ಶನಿವಾರದಂದು ವ್ಯಾಯಾಮ ನಡೆಸುತ್ತಿದ್ದ ವೇಳೆ ಲಘು ಹೃದಯಾಘಾತ ಕಾಣಿಸಿಕೊಂಡಿತ್ತು. ಅವರ ಹೃದಯದ ರಕ್ತನಾಳಗಳಲ್ಲಿ ಅಡೆತಡೆ ಕಂಡುಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.