ನವದೆಹಲಿ: ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟಿ–20 ಸರಣಿಯಲ್ಲಿ ಟೀಂ ಇಂಡಿಯಾ ಎರಡು ಹೆಚ್ಚುವರಿ ಪಂದ್ಯಗಳನ್ನು ಆಡಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಖಚಿತಪಡಿಸಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್‌ನಲ್ಲಿ ನಡೆಯಬೇಕಾಗಿದ್ದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಕೋವಿಡ್ ಆತಂಕದಿಂದಾಗಿ ರದ್ದುಗೊಳಿಸಲಾಗಿತ್ತು. ಇದರಿಂದಾಗಿ ಸುಮಾರು 40 ಮಿಲಿಯನ್ ಪೌಂಡ್‌ಗಳಷ್ಟು ನಷ್ಟ ಉಂಟಾಗಿದ್ದು, ಪರಿಹಾರ ಸೂಚಿಸುವಂತೆ ಇಸಿಬಿ, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮೊರೆ ಹೋಗಿತ್ತು.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ‘ಐದನೇ ಟೆಸ್ಟ್ ಪಂದ್ಯ ರದ್ದತಿಯಿಂದಾಗಿ ಉಂಟಾಗಿರುವ ಬಿಕ್ಕಟ್ಟನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ಇಸಿಬಿ ಒಪ್ಪಿಕೊಂಡರೆ ಮುಂದಿನ ವರ್ಷ ಟೀಂ ಇಂಡಿಯಾ ಎರಡು ಹೆಚ್ಚುವರಿ ಟಿ–20 ಪಂದ್ಯಗಳನ್ನು ಆಡಲಿದೆ’ ಎಂದು ಹೇಳಿದ್ದಾರೆ.

‘ಭಾರತ ತಂಡ 2022ರ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಆಗ ಮೂರು ಟಿ–20 ಪಂದ್ಯಗಳ ಸರಣಿಯಲ್ಲಿ ಬದಲಾವಣೆ ಮಾಡಿ ಐದು ಪಂದ್ಯಗಳನ್ನು ಆಯೋಜಿಸಲಾಗುವುದು. ಆದರೆ, ಇದರ ಬಗ್ಗೆ ಇಸಿಬಿ ಸ್ಪಷ್ಟ ನಿರ್ಧಾರಕ್ಕೆ ಬರಬೇಕಿದೆ’ ಎಂದು ಶಾ ತಿಳಿಸಿದ್ದಾರೆ.

ಭಾರತದ ಪಾಳಯದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಪರಿಣಾಮ ಅಂತಿಮ ಟೆಸ್ಟ್ ಆರಂಭಕ್ಕೂ ಕೇವಲ ಎರಡು ತಾಸಿಗೂ ಮುನ್ನ ಪಂದ್ಯ ರದ್ದುಗೊಳಿಸಲು ತೀರ್ಮಾನಿಸಲಾಗಿತ್ತು. ಭಾರತೀಯ ಆಟಗಾರರ ಆರ್‌ಟಿ–ಪಿಸಿಆರ್ ವರದಿ ನೆಗೆಟಿವ್ ಬಂದರೂ ಕೋವಿಡ್ ಆತಂಕದಿಂದಾಗಿ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಅಂತಿಮ ಪಂದ್ಯವನ್ನು ಭಾರತ ಬಿಟ್ಟುಕೊಟ್ಟಿದೆ ಎಂದು ಐಸಿಸಿ ತೀರ್ಪು ಕಲ್ಪಿಸಿದ್ದಲ್ಲಿ ಸರಣಿ 2-2ರಲ್ಲಿ ಸಮಬಲವಾಗಲಿದೆ.

ಇದನ್ನೂ ಓದಿ... ದೇಶಿ ಕ್ರಿಕೆಟ್: ರಾಜ್ಯ ತಂಡದಲ್ಲಿ ರಾಹುಲ್, ಮಯಂಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.