ನವದೆಹಲಿ: ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಮುಂಬೈ ಇಂಡಿಯನ್ಸ್ ತಂಡದ ಸಹ ಮಾಲೀಕರಾದ ನೀತಾ ಅಂಬಾನಿ ಅವರಿಗೆ ಬಿಸಿಸಿಐ ನೀತಿ ಅಧಿಕಾರಿ ಹಾಗೂ ಒಂಬುಡ್ಸಮನ್ ವಿನೀತ್ ಸರನ್ ನೋಟಿಸ್ ನೀಡಿದ್ದಾರೆ.

ನೀತಾ ಅಂಬಾನಿ ಅವರು ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಮಾಜಿ ಸದಸ್ಯ ಸಂಜೀವ್ ಗುಪ್ತಾ ನೀಡಿರುವ ದೂರಿನ ಹಿನ್ನಲೆಯಲ್ಲಿ ಈ ನೋಟಿಸ್ ನೀಡಲಾಗಿದೆ.

'ಮುಂಬೈ ಇಂಡಿಯನ್ಸ್ ಮಾಲೀಕರಾದ ನೀತಾ ಅವರು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ದೇಶಕಿಯೂ ಹೌದು. ಈ ಸಂಸ್ಥೆಯ ಭಾಗವಾಗಿರುವ ವಯಕಾಮ್ 18 ಈಚೆಗೆ ಐಪಿಎಲ್ ಡಿಜಿಟಲ್ ಮಾಧ್ಯಮ ಹಕ್ಕುಗಳನ್ನು ಖರೀದಿಸಿದೆ. ಇದು ಹಿತಾಸಕ್ತಿ ಸಂಘರ್ಷ ನಿಯಮದ ಉಲ್ಲಂಘನೆ' ಎಂದು ಗುಪ್ತಾ ಆರೋಪಿಸಿದ್ದಾರೆ.

ನೋಟಿಸ್‌ಗೆ ಸೆ 2ರೊಳಗೆ ಉತ್ತರ ನೀಡುವಂತೆ ಸರನ್ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.