ನವದೆಹಲಿ: ಕಳಪೆ ಮಟ್ಟದ ಔಟ್‌ಫೀಲ್ಡ್ ಹಿನ್ನೆಲೆಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಧರ್ಮಶಾಲಾದಿಂದ ಇಂದೋರ್‌ಗೆ ಸ್ಥಳಾಂತರಿಸಲಾಗಿದೆ.

ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಹಿತಿ ನೀಡಿದೆ.

ಬಿಸಿಸಿಐ ಪಿಚ್ ಕ್ಯೂರೇಟರ್ ತಪೋಶ್ ಚಟರ್ಜಿ ವರದಿಯಲ್ಲಿ ಔಟ್‌ಫೀಲ್ಡ್ ಅಂತರರಾಷ್ಟ್ರೀಯ ಪಂದ್ಯ ಆಯೋಜನೆಗೆ ಅನರ್ಹ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನ ವಿರುದ್ಧದ ಗೆಲುವಿಗೆ ವಿರಾಟ್ ಕೊಹ್ಲಿಯೇ ಸ್ಫೂರ್ತಿ: ಜೆಮಿಮಾ ರಾಡ್ರಿಗಸ್

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1ರಿಂದ 5ರವರೆಗೆ ನಡೆಯಲಿದೆ. ಈ ವೇಳೆಗೆ ಔಟ್‌ಫೀಲ್ಡ್ ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಸಿದ್ಧವಾಗುವುದು ಕಠಿಣವೆನಿಸಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಪ್ರಕಟಣೆಯಲ್ಲಿ ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವನ್ನು ಇಂದೋರ್‌ನ ಹೋಲ್ಕರ್ ಸ್ಟೇಡಿಯಂಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.

ನಾಗಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 132 ರನ್ ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.