ಬೆಂಗಳೂರು: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ತಾಜಾ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ ಅಗ್ರಸ್ಥಾನ ಅಲಂಕರಿಸಿದ್ದಾರೆ.

ತಮ್ಮ ಸಹ ಆಟಗಾರ ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿರುವ ಬೂಮ್ರಾ, ಎರಡನೇ ಬಾರಿಗೆ ಅಗ್ರಸ್ಥಾನಕ್ಕೇರಿದ್ದಾರೆ. ಬೂಮ್ರಾ (870) ಅವರು ಅಶ್ವಿನ್‌ಗಿಂತ (869) ಕೇವಲ ಒಂದು ರೇಟಿಂಗ್ ಪಾಯಿಂಟ್ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದ ಕ್ಲೀನ್ ಸ್ವೀಪ್ ಸಾಧನೆಗೈದಿತ್ತು. ಕಾನ್ಪುರದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಬೂಮ್ರಾ ಒಟ್ಟು ಆರು ವಿಕೆಟ್ ಗಳಿಸಿದ್ದರು.

ಬೌಲರ್‌ಗಳ ಪೈಕಿ ರವೀಂದ್ರ ಜಡೇಜ ಅಗ್ರ 10ರ ಪಟ್ಟಿಯಲ್ಲಿದ್ದಾರೆ. ಜಡೇಜ 809 ರೇಟಿಂಗ್ ಅಂಕದೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.

ಜೈಸ್ವಾಲ್, ಕೊಹ್ಲಿ ಜಿಗಿತ...

ಟೆಸ್ಟ್ ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಎರಡು ಸ್ಥಾನಗಳ ಬಡ್ತಿ ಪಡೆದು ಜೀವನಶ್ರೇಷ್ಠ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

ಕಾನ್ಪುರ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲೂ ಜೈಸ್ವಾಲ್ ಅರ್ಧಶತಕ ಸಾಧನೆ ಮಾಡಿದ್ದರು. ಇದರೊಂದಿಗೆ ಜೈಸ್ವಾಲ್ 792 ರೇಟಿಂಗ್ ಪಾಯಿಂಟ್ ಗಳಿಸಿದ್ದಾರೆ.

ಮಾಜಿ ನಾಯಕ ವಿರಾಟ್ ಕೊಹ್ಲಿ ಆರು ಸ್ಥಾನಗಳ ಬಡ್ತಿ ಪಡೆದು ಅಗ್ರ 10ರ ಪಟ್ಟಿಗೆ ಮರಳಿದ್ದು, 6ನೇ ಸ್ಥಾನ (724) ಗಳಿಸಿದ್ದಾರೆ.

ಈ ನಡುವೆ ರಿಷಭ್ ಪಂತ್ ಮೂರು ಸ್ಥಾನಗಳ ಹಿನ್ನಡೆ ಅನುಭವಿಸಿದ್ದು, 9ನೇ ಸ್ಥಾನಕ್ಕೆ (718) ಹಿಂಬಡ್ತಿ ಪಡೆದಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಜಡೇಜ, ಅಶ್ವಿನ್ ಮಿಂಚು...

ಇನ್ನು ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ರವೀಂದ್ರ ಜಡೇಜ ಹಾಗೂ ರವಿಚಂದ್ರನ್ ಅಶ್ವಿನ್ ಅನುಕ್ರಮವಾಗಿ ಅಗ್ರ ಎರಡು ಸ್ಥಾನಗಳನ್ನು ಕಾಯ್ದುಕೊಂಡಿದ್ದಾರೆ. ಜಡೇಜ 468 ಹಾಗೂ ಅಶ್ವಿನ್ 358 ರೇಟಿಂಗ್ ಅಂಕಗಳನ್ನು ಪಡೆದಿದ್ದಾರೆ.
.100 ರನ್ಗೆ ಆಲೌಟ್ ಆದರೂ ಸವಾಲು ಎದುರಿಸಲು ಸಿದ್ಧರಾಗಿದ್ದೆವು: ರೋಹಿತ್ .WTC Ranking: ಬಾಂಗ್ಲಾ ವಿರುದ್ಧ ಗೆಲುವಿನೊಂದಿಗೆ ಅಗ್ರಸ್ಥಾನ ಉತ್ತಮಪಡಿಸಿದ ಭಾರತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.