ನವದೆಹಲಿ: ಸೀರೆ ಉಟ್ಟು, ಹಣೆಗೆ ಬಿಂದಿ ಇಟ್ಟುಕೊಂಡು ಲೈಂಗಿಕ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸುವ ಮೂಲಕ ಹಿರಿಯ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಗಮನ ಸೆಳೆದಿದ್ದಾರೆ.

ದೆಹಲಿಯಲ್ಲಿ ಗುರುವಾರ ಹಿಜ್ರಾ ಹಬ್ಬದ 7ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ‘ಲೈಂಗಿಕ ಅಲ್ಪಸಂಖ್ಯಾತರನ್ನುಸಮಾಜದಲ್ಲಿ ಎಲ್ಲರಂತೆ ಗೌರವಿಸಬೇಕು’ ಎಂದು ಮನವಿ ಮಾಡಿದರು.

ಇತ್ತೀಚೆಗೆ, ಸಲಿಂಗಕಾಮವನ್ನು ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ ವಿವಾದಾತ್ಮಕವಾದ 377ನೇ ಸೆಕ್ಷನ್ ಅನ್ನು ಭಾಗಶಃ ರದ್ದುಪಡಿಸಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿತ್ತು.

ಈ ಬಾರಿಯ ಹಿಜ್ರಾ ಹಬ್ಬವನ್ನು ಎಚ್‌ಐವಿ/ಏಡ್ಸ್ ಅಲೈನ್ಸ್ ಇಂಡಿಯಾ ವತಿಯಿಂದ 'ಜನನವೇ ಹೀಗೆ' (Born this way) ಎಂಬ ಕಿರುಬರಹದ ಅಡಿಯಲ್ಲಿ ಆಚರಿಸಲಾಗುತ್ತಿದೆ.

ಗಂಭೀರ್ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಫೋಟೊಗಳು ವೈರಲ್ ಆಗಿವೆ.

ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಗಂಭೀರ್, ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದರು. ಶ್ರೇಯಸ್ ಐಯ್ಯರ್ ತಂಡವನ್ನು ಮುನ್ನಡೆಸಿದ್ದರು.

ಇದನ್ನೂ ಓದಿ...

*ಸಮ್ಮತಿಯ ಸಲಿಂಗಕಾಮ ಅಪರಾಧವಲ್ಲ

*ಲಿಂಗತ್ವ ಅಲ್ಪಸಂಖ್ಯಾತರಿಗೂ ನಾಗರಿಕಹಕ್ಕು–‘ಸುಪ್ರೀಂ’: ಇವರಿಗೂ ಸ್ವಾತಂತ್ರ್ಯ ಬಂತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.