ನವದೆಹಲಿ: ಟಿವಿ ಕಾರ್ಯಕ್ರಮವೊಂದರಲ್ಲಿ ಮಹಿಳೆಯರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್. ರಾಹುಲ್ ಅವರ ಮೇಲೆ ವಿಧಿಸಲಾಗಿದ್ದ ಅಮಾನತು ಕ್ರಮವನ್ನು ಬಿಸಿಸಿಐ ಕ್ರಿಕೆಟ್ ಆಡಳಿತ ಸಮಿತಿಯು(ಸಿಒಎ) ಹಿಂಪಡೆದಿದೆ.

ಪ್ರಕರಣ ಸಂಬಂಧ ಅಮಿಕಸ್ ಕ್ಯೂರಿಪಿ.ಎಸ್. ನರಸಿಂಹ ಹಾಗೂ ಸಿಒಎಚರ್ಚೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದಾಗ್ಯೂ ವಿಚಾರಣೆ ಬಾಕಿ ಇದ್ದು, ಈ ಸಂಬಂಧ ಸುಪ್ರೀಂ ಕೋರ್ಟ್‌ನಿಂದ ಒಂಬುಡ್ಸ್‌ಮನ್ ನೇಮಕ ಮಾಡಲಾಗುವುದು. ಸುಪ್ರಿಂ ಈ ಪ್ರಕರಣವನ್ನು ಫೆಬ್ರುವರಿ 5ರಂದು ಕೈಗೆತ್ತಿಕೊಳ್ಳಲಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬಿಸಿಸಿಐ, ‘ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್. ರಾಹುಲ್ ಅವರಿಗೆ ಜನವರಿ 11, 2019ರಂದು ವಿಧಿಸಲಾಗಿದ್ದ ಅಮಾನತುಆದೇಶವನ್ನು ಒಂಬುಡ್ಸ್‌ಮನ್ ತೀರ್ಮಾನದವರೆಗೆ ಹಿಂಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿಕಸ್ ಕ್ಯೂರಿ ಪಿ.ಎಸ್. ನರಸಿಂಹ ಅವರ ಸಮ್ಮತಿಯ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ’ ಎಂದು ತಿಳಿಸಿದೆ.

‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್ ಮತ್ತು ಹಾರ್ದಿಕ್, ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅದು ವಿವಾದದ ರೂಪ ಪಡೆದಿದ್ದರಿಂದ ಅವರನ್ನು ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಿಂದ ಅಮಾನತುಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.