ಮುಂಬೈ: ಗಾಯಗೊಂಡಿರುವ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರ ಬದಲಿಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ–20 ವಿಶ್ವಕಪ್ ಪಂದ್ಯಾವಳಿಗೆ ಮೊಹಮ್ಮದ್ ಶಮಿ ಅವರಿಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮೂಲಕ ತಿಳಿಸಿದೆ.

ಬೆನ್ನುನೋವಿನ ಗಾಯದ ಸಮಸ್ಯೆಯಿಂದ ಬೂಮ್ರಾ ಅವರು ವಿಶ್ವಕಪ್ ತಂಡದಿಂದ ಹೊರಗುಳಿದಿದ್ದರು. ಮೊಣಕಾಲು ಗಾಯದಿಂದ ರವೀಂದ್ರ ಜಡೇಜಾ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಬೂಮ್ರಾ ಸಹ ಗಾಯಾಳು ಪಟ್ಟಿ ಸೇರಿದ್ದು, ಭಾರತಕ್ಕೆ ನುಂಗಲಾರದ ತುತ್ತಾಗಿತ್ತು.

‘ಶಮಿ ಆಸ್ಟ್ರೇಲಿಯಾ ತಲುಪಿದ್ದು, ಬ್ರಿಸ್ಬೇನ್ ಅಭ್ಯಾಸ ಪಂದ್ಯಕ್ಕೂ ಮುನ್ನ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ’ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಮೊಹಮ್ಮದ್ ಶಮಿ ಮತ್ತು ಶಾರ್ದೂಲ್ ಟಾಕೂರ್ ಅವರನ್ನು ಹೆಚ್ಚುವರಿ ವೇಗದ ಬೌಲರ್‌ಗಳಾಗಿ ಆಯ್ಕೆ ಮಾಡಲಾಗಿದ್ದು, ಸದ್ಯದಲ್ಲೇ ಅವರು ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ಗ್ರೂಪ್ ಹಂತಕ್ಕೆ ಅರ್ಹತಾ ಪಂದ್ಯಗಳ ಮೂಲಕ ಭಾನುವಾರ ಟಿ–20ವಿಶ್ವಕಪ್ ಟೂರ್ನಿಗೆ ಚಾಲನೆ ಸಿಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯಾ, ರವಿಚಂದ್ರನ್ ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವಬೆಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.