ಸಿಡ್ನಿ: ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಬ್ಯಾಟರ್ ಡೇವಿಡ್ ವಾರ್ನರ್, ಏಕದಿನ ಕ್ರಿಕೆಟ್‌ನಿಂದಲೂ ದೂರ ಸರಿಯುವುದಾಗಿ ಸೋಮವಾರ ಹೇಳಿದ್ದಾರೆ.

ಆದರೆ 2025ರ ಚಾಂಪಿಯನ್ಸ್ ಟ್ರೋಫಿಗೆ ಲಭ್ಯವಿರುವುದಾಗಿ ತಿಳಿಸಿದ್ದಾರೆ.
.ಟೆಸ್ಟ್ ಕ್ರಿಕೆಟ್‌ಗೆ ಡೇವಿಡ್ ವಾರ್ನರ್ ವಿದಾಯ ಸಾಧ್ಯತೆ.
ಜ.3ರಿಂದ ಪಾಕಿಸ್ತಾನ ವಿರುದ್ಧ ಸಿಡ್ನಿಯಲ್ಲಿ ನಡೆಯುವ ಪಂದ್ಯವು ವಾರ್ನರ್ ಅವರ ವೃತ್ತಿ ಜೀವನದ ಕೊನೆಯ ಟೆಸ್ಟ್ ಪಂದ್ಯವಾಗಲಿದೆ. ಅದಕ್ಕೂ ಮುನ್ನ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ನವೆಂಬರ್‌ನಲ್ಲಿ ಭಾರತದ ವಿರುದ್ಧ ಆಡಿದ ಏಕದಿನ ವಿಶ್ವಕಪ್‌ನ ಫೈನಲ್, ತಮ್ಮ ಕೊನೆಯ ಏಕದಿನ ಪಂದ್ಯ ಎಂದು ಅವರು ಹೇಳಿದ್ದಾರೆ.

‘ನಾನು ಏಕದಿನ ಕ್ರಿಕೆಟ್‌ನಿಂದಲೂ ನಿವೃತ್ತಿ ಪಡೆಯುತ್ತಿದ್ದೇನೆ. ಇದನ್ನೇ ನಾನು ಭಾರತದಲ್ಲಿ ಹೇಳಿದ್ದು. ಭಾರತದಲ್ಲಿ ವಿಶ್ವಕಪ್ ಗೆದ್ದಿರುವುದು ನಿಜಕ್ಕೂ ದೊಡ್ಡ ಸಾಧನೆ’ ಎಂದು ಅವರು ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
.ರಾಷ್ಟ್ರ ಪ್ರಶಸ್ತಿ ವಿಜೇತ ಅಲ್ಲು ಅರ್ಜುನ್ಗೆ ಡೇವಿಡ್ ವಾರ್ನರ್ ಅಭಿನಂದನೆ.
2009ರಲ್ಲಿ ಹೋಬರ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ವಾರ್ನರ್, ಈವರೆಗೂ 161 ಒಡಿಐ ಪಂದ್ಯಗಳನ್ನು ಆಡಿದ್ದಾರೆ. 45.30 ಸರಾಸರಿಯಲ್ಲಿ 6,932 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕ ಹಾಗೂ 33 ಅರ್ಧಶತಕಗಳು ಸೇರಿವೆ.

111 ಟೆಸ್ಟ್ ಪಂದ್ಯಗಳು ಆಡಿರುವ ವಾರ್ನರ್ 26 ಶತಕ ಹಾಗೂ 36 ಅರ್ಧಶತಕಗಳು ಸೇರಿ 8,695 ರನ್ ಗಳಿಸಿದ್ದಾರೆ. ಟೆಸ್ಟ್‌ನಲ್ಲಿ ಅವರ ಸರಾಸರಿ 44.5.

ಟಿ–20 ಮಾದರಿಯ ಪಂದ್ಯಗಳಲ್ಲಿ ವಾರ್ನರ್ ಮುಂದುವರಿಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.