ಕೋಲ್ಕತ್ತಾ: ಈಡನ್ ಗಾರ್ಡನ್ನಲ್ಲಿ ಭಾರತ ಮತ್ತು ಬಾಂಗ್ಲಾ ನಡುವೆ ನಡೆದ ಪಿಂಕ್ ಬಾಲ್– ಹಗಲು ರಾತ್ರಿ ಪಂದ್ಯದಲ್ಲಿ ಉಮೇಶ್ ಜಾದವ್ ಮತ್ತು ಇಶಾಂತ್ ಶರ್ಮಾ ಅವರ ಮಾರಕ ದಾಳಿಗೆ ಬಾಂಗ್ಲಾ ತಂಡ ನಲುಗಿದೆ. ಟೀಂ ಇಂಡಿಯಾಕ್ಕೆ ಇನ್ನಿಂಗ್ಸ್ ಮತ್ತು 46 ರನ್ಗಳ ಜಯ ದಾಖಲಾಗಿದೆ.

ಇದರೊಂದಿಗೆ 2 ಪಂದ್ಯಗಳ ಸರಣಿಯನ್ನು ಭಾರತ 2–0 ಅಂತರದಲ್ಲಿ ಗೆದ್ದು ಬೀಗಿತು. ಈ ಜಯದ ಮೂಲಕ ಸತತ ನಾಲ್ಕು ಇನಿಂಗ್ಸ್ ಗೆಲುವು ದಾಖಲಿಸಿದ ತಂಡ ಎಂಬ ಕೀರ್ತಿಗೂ ಪಾತ್ರವಾಯಿತು.

ಬಾಂಗ್ಲಾದೇಶ ತನ್ನ ಮೊದಲ ಇನಿಂಗ್ಸ್ನಲ್ಲಿ 106 ರನ್ಗಳಿಗೆ ಆಲೌಟ್ ಆಗಿತ್ತು. ಭಾರತ ತನ್ನ ಮೊದಲ ಇನಿಂಗ್ಸ್ನಲ್ಲಿ 9 ವಿಕೆಟ್ ನಷ್ಟಕ್ಕೆ 347ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇದನ್ನು ಬೆನ್ನುಹತ್ತಿದ ಬಾಂಗ್ಲಾ 195ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡು ಭಾರತಕ್ಕೆ ಶರಣಾಗಿದೆ.

ಆ ಮೂಲಕ ಐದು ದಿನಗಳ ಟೆಸ್ಟ್ ಮೂರೇ ದಿನಕ್ಕೆ ಮುಕ್ತಾಯಗೊಂಡಿದೆ.

ಈ ಪಂದ್ಯದಲ್ಲಿ ಗಮನ ಸೆಳೆದಿದ್ದು ಭಾರತದ ಬೌಲರ್ಗಳು. ಎರಡನೇ ಇನಿಂಗ್ಸ್ನಲ್ಲಿ ಉಮೇಶ್ ಯಾದವ್ 5 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ 4 ವಿಕೆಟ್ ಕಿತ್ತರು.

ಈ ಪಂದ್ಯದ ಮತ್ತೊಂದು ವಿಶೇಷವೆಂದರೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಶತಕ ದಾಖಲಿಸುವ ಮೂಲಕ ಈ ಹಿಂದಿನ ಹಲವು ದಾಖಲೆಗಳನ್ನು ಮುರಿದಿದ್ದರು.

ಇದನ್ನೂ ಓದಿ:IND vs BAN Pink Test | ಸಚಿನ್ ಸೇರಿ ಹಲವರ ದಾಖಲೆ ಮೀರಿದ ಕೊಹ್ಲಿ

ಆಟಗಾರರಿಗೆ ಅಭಿನಂದನೆ

ಇದೇ ವೇಳೆ ಈಡನ್ ಗಾರ್ಡನ್ಸ್ಗೆ ಆಗಮಿಸಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತ ಹಾಗೂ ಬಾಂಗ್ಲಾ ದೇಶದ ಆಟಗಾರರಿಗೆ ಅಭಿನಂದನೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.