ನವದೆಹಲಿ: ಕ್ರಿಕೆಟಿಗ ಶುಭಮನ್ ಗಿಲ್ ಅವರ ಸಹೋದರಿಯನ್ನು ನಿಂದಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿ, ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು) ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.

ಭಾನುವಾರ ಬೆಂಗಳೂರಿನಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ, ಆರ್‌ಸಿಬಿ ತಂಡವನ್ನು ಮಣಿಸಿತ್ತು. ಆ ಪಂದ್ಯದಲ್ಲಿ ಗಿಲ್ ಶತಕ ಗಳಿಸಿದ್ದರು.

ಆರ್‌ಸಿಬಿ ಸೋಲಿನಿಂದ ಹತಾಶೆಗೊಂಡ ಕೆಲವರು ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಗಿಲ್ ಹಾಗೂ ಸಹೋದರಿ ಶಹನೀಲ್ ಗಿಲ್ ಅವರನ್ನು ಕೆಟ್ಟ ಪದಗಳಿಂದ ನಿಂದಿಸಿದ್ದರು. ಶಹನೀಲ್ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದ ಫೋಟೊಗೆ ಅಸಭ್ಯವಾಗಿ ಕಮೆಂಟ್ ಮಾಡಿದ್ದರು.

‘ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಹಾಕಲಾಗಿದೆ. ಕೆಲವರು ಗಿಲ್ ಸಹೋದರಿಗೆ ಅತ್ಯಾಚಾರ ಮತ್ತು ಹಲ್ಲೆಯ ಬೆದರಿಕೆ ಹಾಕಿದ್ದಾರೆ. ಇದು ಅಪರಾಧ ಕೃತ್ಯವಾಗಿದ್ದು, ತಪ್ಪಿತಸ್ಥರ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ನೋಟಿಸ್‌ನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.