ಮುಂಬೈ: ಶ್ರೀಲಂಕಾ ವಿರುದ್ಧದ ಟಿ–20 ಸರಣಿಯಿಂದ ಭಾರತ ಕ್ರಿಕೆಟ್ ತಂಡದ ವೇಗಿ ದೀಪಕ್ ಚಾಹರ್ ಮತ್ತು ಬ್ಯಾಟರ್ ಸೂರ್ಯಕುಮಾರ್ ಯಾದವ್ ಹೊರಗುಳಿದಿದ್ದಾರೆ.

ಭಾನುವಾರ ಕೋಲ್ಕತ್ತದಲ್ಲಿ ನಡೆದವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಟಿ-20 ಪಂದ್ಯದ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಅವರು ಮೂಳೆ ಮುರಿತಕ್ಕೆ ಒಳಗಾಗಿದ್ದರೆ, ದೀಪಕ್ ಬೌಲಿಂಗ್ ಸಮಯದಲ್ಲಿ ಬಲಗಾಲಿನ ಮೂಳೆಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಭಾರತದ ಎದುರಿನ ಟಿ20 ಸರಣಿಯ ಮೊದಲ ಪಂದ್ಯವು ಫೆಬ್ರುವರಿ 24ರಂದು ಲಖನೌನಲ್ಲಿ ನಡೆಯಲಿದೆ. ಉಳಿದ ಎರಡು ಪಂದ್ಯಗಳು ಕ್ರಮವಾಗಿ 26 ಮತ್ತು 27ರಂದು ಧರ್ಮಶಾಲಾದಲ್ಲಿ ನಿಗದಿಯಾಗಿವೆ.

ಉಭಯ ಆಟಗಾರರು ಚೇತರಿಕೆಗೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳುತ್ತಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಆದರೆ, ಈವರೆಗೆ ಬದಲಿ ಆಟಗಾರರನ್ನು ಘೋಷಿಸಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.