ನವದೆಹಲಿ: ಇಲ್ಲಿ ನಡೆಯುತ್ತಿರುವ ಮಹತ್ವದ ಐಪಿಎಲ್ ಟಿ–20 ಕ್ರಿಕೆಟ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿತು.

ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಡೆಲ್ಲಿಗೆ ಆರಂಭಿಕ ಆಘಾತ ಕಾದಿತ್ತು. ಸ್ಫೋಟಕ ಆರಂಭಿಕ ಬ್ಯಾಟರ್ ಜೇಕ್ ಫ್ರೇಸರ್ ಮೆಕ್ಗುರ್ಕ್ ಶೂನ್ಯಕ್ಕೆ ನಿರ್ಗಮಿಸಿದರು. ಆದರೂ ಎದೆಗುಂದದ ಡೆಲ್ಲಿ ಬ್ಯಾಟರ್ಗಳು ಅಬ್ಬರದ ಬ್ಯಾಟಿಂಗ್ ಮಾಡಿದರು.

ಮತ್ತೊಬ್ಬ ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ 33 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ ಸಹಿತ 58 ರನ್ ಸಿಡಿಸಿದರು.ಶಾಯ್ ಹೋಪ್ 38 ಮತ್ತು ರಿಷಭ್ ಪಂತ್ 33 ರನ್ ಸಿಡಿಸಿದರು

ಅಂತಿಮ ಓವರ್ಗಳಲ್ಲಿ ಅಬ್ಬರಿಸಿದ ಟ್ರಿಸ್ಟನ್ ಸ್ಟಬ್ಸ್ 25 ಎಸೆತಗಳಲ್ಲಿ 57 ರನ್ ಸಿಡಿಸಿ ತಂಡದ ಉತ್ತಮ ಮೊತ್ತಕ್ಕೆ ನೆರವಾದರು. ಲಖನೌ ಪರ ಉಲ್ ಹಕ್ 2 ವಿಕೆಟ್ ಪಡೆದರು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಲಖನೌ ತಂಡ 20 ಓವರ್ಗಳಲ್ಲಿ 189 ರನ್ ಮಾತ್ರಗಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.