ಬರ್ಮಿಂಗ್ಹ್ಯಾಮ್: ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡದ ಆಟಗಾರರೊಂದಿಗೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮಾತುಕತೆ ನಡೆಸಿದರು.

ಶನಿವಾರ ರಾತ್ರಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಜಯಿಸಿದ ನಂತರ ಧೋನಿ ಕೆಲವು ಯುವ ಆಟಗಾರರೊಂದಿಗೆ ಮಾತನಾಡಿದರು. ವಿಕೆಟ್ಕೀಪರ್–ಬ್ಯಾಟರ್ ರಿಷಭ್ ಪಂತ್, ಇಶಾನ್ ಕಿಶನ್ ಮತ್ತು ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಕೆಲವು ಸಲಹೆಗಳನ್ನು ನೀಡಿದರು.

ಧೋನಿಯವರೊಂದಿಗೆ ತಾವು ಮಾತನಾಡುತ್ತಿರುವ ಚಿತ್ರಗಳನ್ನು ರಿಷಭ್ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.

‘ದಿಗ್ಗಜ ಎಂ.ಎಸ್. ಧೋನಿ ಮಾತನಾಡುವಾಗ ಎಲ್ಲರ ಕಿವಿಗಳು ಅವರತ್ತಲೇ ಇರುತ್ತವೆ’ ಎಂದು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಂದೇಶ ಹಾಕಿದೆ.

ಭಾರತ ತಂಡದ ಮಾಜಿ ನಾಯಕ ಧೋನಿ ಸದ್ಯ ಬ್ರಿಟನ್ ಪ್ರವಾಸದಲ್ಲಿದ್ದಾರೆ. ಈಚೆಗೆ ಅವರು ವಿಂಬಲ್ಡನ್ನಲ್ಲಿ ಪಂದ್ಯ ವೀಕ್ಷಿಸಿದ್ದು ವರದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.