ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್‌ ಆಟಗಾರ ಮೊಯಿನ್ ಅಲಿ

Published : 8 ಸೆಪ್ಟೆಂಬರ್ 2024, 7:56 IST
Last Updated : 8 ಸೆಪ್ಟೆಂಬರ್ 2024, 7:56 IST
ಫಾಲೋ ಮಾಡಿ
Comments

ಲಂಡನ್: ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಮೊಯಿನ್ ಅಲಿ ಅವರು ಇಂದು (ಭಾನುವಾರ) ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಮೊಯಿನ್ ಅಲಿ ಅವರು ಇದೇ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು.

ಮೊಯಿನ್ ಅಲಿ ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅವರು ಒಟ್ಟು 298 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಎಲ್ಲಾ ಮಾದರಿಗಳಲ್ಲೂ 6,678 ರನ್‌ ಗಳಿಸಿದ್ದಾರೆ. ಜತೆಗೆ, 366 ವಿಕೆಟ್‌ಗಳನ್ನು ಪಡೆದಿದ್ದಾರೆ. 2019ರ ವಿಶ್ವಕಪ್ ಮತ್ತು 2022ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

‘ನನಗೆ 37 ವರ್ಷ ವಯಸ್ಸಾಗಿದೆ. ಈ ತಿಂಗಳ ಆಸ್ಟ್ರೇಲಿಯಾ ಸರಣಿಗೂ ಆಯ್ಕೆಯಾಗಿಲ್ಲ. ನಾನು ಇಂಗ್ಲೆಂಡ್‌ ಪರವಾಗಿ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಇದು ಮುಂದಿನ ಪೀಳಿಗೆಗೆ ಅವಕಾಶ ನೀಡುವ ಸಮಯವಾಗಿದ್ದು, ನಿವೃತ್ತಿ ಘೋಷಿಸುವುದು ಸೂಕ್ತ’ ಎಂದು ಮೊಯಿನ್ ಅಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್‌) ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಮೊಯಿನ್ ಅಲಿ ಕಣಕ್ಕಿಳಿದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT