ದುಬೈ: ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎಂದೇ ಪರಿಗಣಿಸಲಾಗಿರುವ ಇಂಗ್ಲೆಂಡ್ಗೆ ಟ್ವೆಂಟಿ–20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ಈಗ ಭಾರಿ ಸವಾಲು ಎದುರಾಗಿದೆ. ಶನಿವಾರ ನಡೆಯಲಿರುವ ಪಂದ್ಯದಲ್ಲಿ ಏಯಾನ್ ಮಾರ್ಗನ್ ಬಳಗ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಮೊದಲ ಎರಡೂ ಪಂದ್ಯಗಳಲ್ಲಿ ಜಯ ಗಳಿಸಿರುವ ಉಭಯ ತಂಡಗಳು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿವೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೆಮಿಫೈನಲ್ ಹಾದಿ ಸುಗಮವಾಗಿಸುವ ಹಂಬಲವೂ ಈ ತಂಡಗಳಿಗೆ ಇದೆ.

ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಭಾಗ ನಿರೀಕ್ಷಿತ ಮಟ್ಟದಲ್ಲಿ ಆಡಿರಲಿಲ್ಲ. ಆದರೆ ನಂತರ ಚೇತರಿಸಿಕೊಂಡಿತ್ತು. ಡೇವಿಡ್ ವಾರ್ನರ್ ಮತ್ತು ನಾಯಕ ಆ್ಯರನ್ ಫಿಂಚ್ ಲಯಕ್ಕೆ ಮರಳಿರುವುದರಿಂದ ತಂಡಕ್ಕೆ ಆನೆಬಲ ಬಂದಂತಾಗಿದೆ.

ಬೌಲಿಂಗ್ ವಿಭಾಗದ ಮೇಲೆ ಆಸ್ಟ್ರೇಲಿಯಾದ ಹೆಚ್ಚು ಭರವಸೆ ಇರಿಸಿಕೊಂಡಿದೆ. ವೇಗಿಗಳಾದ ಜೋಶ್ ಹ್ಯಾಜಲ್ವುಡ್, ಮಿಷೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ ಅವರಿಗೆ ಲೆಗ್ ಸ್ಪಿನ್ನರ್ ಆ್ಯಡಂ ಜಂಪಾ ಅವರಿಂದ ಉತ್ತಮ ಬೆಂಬಲ ಲಭಿಸುತ್ತಿದೆ. ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಮಾರ್ಕಸ್ ಸ್ಟೋಯಿನಿಸ್ ಅವರ ಬೌಲಿಂಗ್ ಪರಿಣಾಮ ಬೀರದೇ ಇರುವುದೊಂದೇ ತಂಡದ ಆತಂಕ.

ಇಂಗ್ಲೆಂಡ್ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಗಳಿಸಿ ಮೂರನೇ ಪಂದ್ಯಕ್ಕೆ ಅಣಿಯಾಗಿದೆ. ಇದು ಆಸ್ಟ್ರೇಲಿಯಾ ಪಾಳಯದಲ್ಲಿ ಸ್ವಲ್ಪ ತಳಮಳ ಉಂಟುಮಾಡಿದೆ. ತಂಡದ ಬೌಲಿಂಗ್ ಆರಂಭಿಸುವ ಜವಾಬ್ದಾರಿಯ ಆಫ್ ಸ್ಪಿನ್ನರ್ ಮೋಯಿನ್ ಅಲಿ ಅವರಿಗೆ ನೀಡಲಾಗಿದೆ. ಎರಡೂ ಪಂದ್ಯಗಳಲ್ಲಿ ಅವರು ಇದನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಡೆತ್ ಓವರ್ಗಳಲ್ಲಿ ಟೈಮಲ್ ಮಿಲ್ಸ್ ಪರಿಣಾಮ ಬೀರುತ್ತಿದ್ದಾರೆ.

ಆರಂಭ: ರಾತ್ರಿ 7.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.