ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ (77) ಅವರು ಇಂದು ನಿಧನರಾದರು.

ಇವರು 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67 ಟೆಸ್ಟ್‌ಗಳ ಪಂದ್ಯಗಳನ್ನು ಆಡಿದ್ದಾರೆ. ಬಿಶನ್ ಸಿಂಗ್ ಅವರು ಭಾರತದ ಅತ್ಯಂತ ಪ್ರಸಿದ್ಧ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ.

ಎರಪಳ್ಳಿ ಪ್ರಸನ್ನ, ಬಿ.ಎಸ್ ಚಂದ್ರಶೇಖರ್ ಮತ್ತು ಎಸ್. ವೆಂಕಟರಾಘವನ್ ಅವರೊಂದಿಗೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಪಿನ್ ಕ್ವಾರ್ಟೆಟ್ ಅನ್ನು ರಚಿಸಿ, ವಿಶ್ವಾದ್ಯಂತ ಸ್ಪಿನ್ ಬೌಲಿಂಗ್ ಕಲೆಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ.

ಅಮೃತಸರ ಮೂಲದವರಾದ ಇವರು ಭಾರತದ ಮೊದಲ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯದ (ODI) ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬಿಶನ್ ಸಿಂಗ್ ನಿಧನಕ್ಕೆ ಬಿಸಿಸಿಐ ಸಂತಾಪ ಸೂಚಿಸಿದೆ.ಭಾರತದ ಮಾಜಿ ಟೆಸ್ಟ್ ನಾಯಕ ಮತ್ತು ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ಅವರ ದುಃಖದ ನಿಧನಕ್ಕೆ ಬಿಸಿಸಿಐ ಸಂತಾಪ ವ್ಯಕ್ತಪಡಿಸಿದೆ. ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.