ನವದೆಹಲಿ: ಅನುಭವಿ ಎಡಗೈ ಬ್ಯಾಟ್ಸ್ಮನ್ ಗೌತಮ್ ಗಂಭೀರ್, ರಣಜಿ ಟ್ರೋಫಿಯಲ್ಲಿ ದೆಹಲಿ ತಂಡದ ಸಾರಥ್ಯ ವಹಿಸದಿರಲು ತೀರ್ಮಾನಿಸಿದ್ದಾರೆ. ಹೊಸಬರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅವರು ನಾಯಕತ್ವ ತೊರೆದಿದ್ದಾರೆ.

‘ಹೊಸಬರಿಗೆ ನಾಯಕತ್ವದ ‘ಬೇಟನ್’ ಹಸ್ತಾಂತರಿಸಲು ಇದು ಸಕಾಲ. ಮುಂಬರುವ ರಣಜಿ ಟ್ರೋಫಿಯಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನನಗೆ ನೀಡಬೇಡಿ ಎಂದು ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆಗೆ (ಡಿಡಿಸಿಎ) ಮನವಿ ಮಾಡಿದ್ದೇನೆ. ಆಟಗಾರನಾಗಿ ತಂಡದಲ್ಲಿ ಮುಂದುವರಿಯಲು ಇಚ್ಛಿಸುತ್ತೇನೆ. ಹೊಸ ನಾಯಕನಿಗೆ ಎಲ್ಲಾ ಬಗೆಯ ಸಹಕಾರ ನೀಡುತ್ತೇನೆ’ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.

37 ವರ್ಷದ ಗಂಭೀರ್ ನಾಯಕತ್ವದಲ್ಲಿ ದೆಹಲಿ ತಂಡ ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಫೈನಲ್ ಪ್ರವೇಶಿಸಿತ್ತು.

ಈ ಸಲದ ರಣಜಿ ಟ್ರೋಫಿಯಲ್ಲಿ ನಿತೀಶ್ ರಾಣಾ, ದೆಹಲಿ ತಂಡವನ್ನು ಮುನ್ನಡೆಸಲಿದ್ದಾರೆ. 24 ವರ್ಷ ವಯಸ್ಸಿನ ರಾಣಾ, 24 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. 26 ವರ್ಷ ವಯಸ್ಸಿನ ಧ್ರುವ ಶೋರೆ ಉಪನಾಯಕನ ಜವಾಬ್ದಾರಿ ನಿಭಾಯಿಸಲಿದ್ದಾರೆ.

‘ನಾಯಕತ್ವ ತ್ಯಜಿಸುವ ವಿಚಾರವನ್ನು ಗಂಭೀರ್, ಆಯ್ಕೆ ಸಮಿತಿ ಮುಖ್ಯಸ್ಥ ಅಮಿತಾಭ್ ಭಂಡಾರಿ ಅವರಿಗೆ ತಿಳಿಸಿದ್ದಾರೆ. ಅವರ ತೀರ್ಮಾನವನ್ನು ನಾವು ಗೌರವಿಸುತ್ತೇವೆ’ ಎಂದು ಡಿಡಿಸಿಎಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೆಹಲಿ ತಂಡ ನವೆಂಬರ್ 12ರಂದು ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಹಿಮಾಚಲ ಪ್ರದೇಶ ಎದುರು ಸೆಣಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.