ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಿರುಸಿನ ಹೊಡೆತಗಳಿಂದ ರೋ‘ಹಿಟ್’ ಶರ್ಮಾ ಎಂದು ಕರೆಯಿಸಿಕೊಳ್ಳುವ ಅವರು ಅಭಿಮಾನಿಗಳ ನೆಚ್ಚಿನ ಕ್ರಿಕೆಟ್ ಆಟಗಾರ ಎನಿಸಿಕೊಂಡಿದ್ದಾರೆ.

ಏಪ್ರಿಲ್ 30, 1987ರಲ್ಲಿ ಮಹಾರಾಷ್ಟ್ರದ ಬಾನ್ಸೋದ್ನಲ್ಲಿ ಜನಿಸಿದ ರೋಹಿತ್ ಶರ್ಮಾ ಅವರ ಅವರ ಪೂರ್ಣ ಹೆಸರು ರೋಹಿತ್ ಗುರುನಾಥ ಶರ್ಮಾ. ಬಲಗೈ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದ ಅವರು 2007ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು.

ರೋಹಿತ್ ಶರ್ಮಾ ಅವರು ಕ್ರಿಕೆಟ್ನ ಮುಖ್ಯವಾಹಿನಿಗೆ ಬರುವುದಕ್ಕೂ ಮೊದಲು ಆಫ್ಸ್ಪಿನ್ನರ್ ಆಗಿ ಆಡುತ್ತಿದ್ದರು. ಆನಂತರ ಅವರು ಬ್ಯಾಟರ್ ಆಗಿ ರೂಪಾಂತರಗೊಂಡರು. ನಂತರ ಅದರಲ್ಲಿಯೇ ಯಶಸ್ಸು ಕಂಡುಕೊಂಡರು.

2007ರಲ್ಲಿ ಬೆಲ್ಫೆಸ್ಟ್ನಲ್ಲಿ ಐರ್ಲೆಂಡ್ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು.

ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲೂ ಶತಕ ಸಿಡಿಸಿದ ಇಬ್ಬರು ಭಾರತೀಯರ ಪೈಕಿ ರೋಹಿತ್ ಶರ್ಮಾ ಅವರೂ ಒಬ್ಬರು. ಶರ್ಮಾ ಅವರಂತೆಯೇ ಸೌರವ್ ಗಂಗೂಲಿ ಅವರೂ ಈ ಸಾಧನೆ ಮಾಡಿದ್ದಾರೆ.

ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ 264 ರನ್ಗಳನ್ನು ಸಿಡಿಸಿದ್ದಾರೆ. ಇದು ಅವರ ಬೆಸ್ಟ್, ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟರ್ ರೋಹಿತ್ ಶರ್ಮಾ.

2013ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು ಎರಡು ಅರ್ಧಶತಕಗಳ ಮೂಲಕ ಭಾರತ ಚಾಂಪಿಯನ್ ಪಟ್ಟ ದಕ್ಕಿಸಿಕೊಳ್ಳಲು ನೆರವಾಗಿದ್ದರು. ಅದೇ ವರ್ಷ ಆಸ್ಟ್ರೇಲಿಯಾದ ವಿರುದ್ಧ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ 209 ರನ್ ಸಿಡಿಸಿ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದರು.

ಐಪಿಎಲ್ನಲ್ಲೂ ಅಮೋಘ ಪ್ರದರ್ಶನ ನೀಡಿದ್ದ ಅವರು, 2013ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಂಡರು. ತಮ್ಮ ನಾಯಕತ್ವದಲ್ಲಿ ತಂಡವನ್ನು ಐದು ಬಾರಿ ಚಾಂಪಿಯನ್ ಆಗಿ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಈ ವರ್ಷದ ಐಪಿಎಲ್ ಪಂದ್ಯದಲ್ಲಿ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದಾರೆ.

ಕ್ರಿಕೆಟ್ ಕ್ಷೇತ್ರದಲ್ಲಿನ ರೋಹಿತ್ ಸಾಧನೆಗೆ 2015ರಲ್ಲಿ ಅರ್ಜುನ ಪ್ರಶಸ್ತಿ, 2020ರಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗಳು ಲಭಿಸಿವೆ. ಡಿಸೆಂಬರ್ 2015ರಲ್ಲಿ ರಿತಿಕಾ ಅವರನ್ನು ರೋಹಿತ್ ವಿವಾಹವಾಗಿದ್ದರು. ದಂಪತಿಗೆ ಮುದ್ದಾದ ಹೆಣ್ಣು ಮಗುವೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.