ದುಬೈ: ಭಾರತದ ರೋಹಿತ್ ಶರ್ಮಾ, ಭಾನುವಾರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟ್ಸ್‌ಮನ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಈ ವರ್ಷದ ಜುಲೈನಲ್ಲಿ ಪ್ರಕಟವಾಗಿದ್ದ ಪಟ್ಟಿಯಲ್ಲಿ ಮೊದಲ ಬಾರಿಗೆ ಎರಡನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದ ರೋಹಿತ್ ಬಳಿಕ ಕುಸಿತ ಕಂಡಿದ್ದರು. ಈ ಬಾರಿಯ ಏಷ್ಯಾಕಪ್‌ನಲ್ಲಿ ಒಟ್ಟು 317ರನ್ ಗಳಿಸಿದ್ದ ಅವರು ಈಗ ಮತ್ತೆ ಈ ಸ್ಥಾನವನ್ನು ಅಲಂಕರಿಸಿದ್ದಾರೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಏಷ್ಯಾಕಪ್‌ನಲ್ಲಿ ಗರಿಷ್ಠ ರನ್ (342) ಗಳಿಸಿದ ಸಾಧನೆ ಮಾಡಿದ್ದ ಶಿಖರ್ ಧವನ್ ಐದನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ಚೈನಾಮನ್ ಶೈಲಿಯ ಬೌಲರ್ ಕುಲದೀಪ್ ಯಾದವ್ ಮೂರನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ಇದು ಕುಲದೀಪ್ ಅವರ ಕ್ರೀಡಾಬದುಕಿನ ಶ್ರೇಷ್ಠ ಸಾಧನೆ ಎನಿಸಿದೆ.

ಏಕದಿನ ತಂಡಗಳ ರ‍್ಯಾಂಕಿಂಗ್‌ನಲ್ಲಿ ಭಾರತ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಇಂಗ್ಲೆಂಡ್ ತಂಡ ಮೊದಲ ಸ್ಥಾನದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.