ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮಹತ್ವದ ಕ್ಯಾಚ್ ಕೈಚೆಲ್ಲಿರುವ ಪಾಕಿಸ್ತಾನದ ಆಟಗಾರ ಹಸನ್ ಅಲಿ, ಬಹಿರಂಗ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. 'ನನ್ನ ಪ್ರದರ್ಶನವು ನಿಮ್ಮ ನಿರೀಕ್ಷೆಗಳನ್ನು ಮುಟ್ಟದ ಕಾರಣ ನೀವೆಲ್ಲರೂ ಅಸಮಾಧಾನಗೊಂಡಿದ್ದೀರಿ ಎಂದು ನನಗೆ ತಿಳಿದಿದೆ. ಆದರೆ ಎಲ್ಲರಿಗಿಂತಲೂ ಹೆಚ್ಚು ನಾನೇ ನಿರಾಸೆಗೊಂಡಿದ್ದೇನೆ. ನನ್ನ ಮೇಲಿನ ನಿರೀಕ್ಷೆಗಳನ್ನು ಕಳೆದುಕೊಳ್ಳಬೇಡಿ. ಪಾಕಿಸ್ತಾನ ಕ್ರಿಕೆಟ್‌ಗೆ ಸಾಧ್ಯವಾದಷ್ಟು ಆಡಲು ಬಯಸುತ್ತೇನೆ. ಅದಕ್ಕಾಗಿ ಕಠಿಣ ಶ್ರಮ ವಹಿಸುತ್ತೇನೆ. ಇದು ನನ್ನನ್ನು ಮತ್ತಷ್ಟು ಬಲಶಾಲಿಯಾಗಿಸಲಿದೆ. ನಿಮ್ಮೆಲ್ಲರ ಹಾರೈಕೆಗಾಗಿ ಧನ್ಯವಾದಗಳು ' ಎಂದು ಹೇಳಿದ್ದಾರೆ.

ಪಾಕಿಸ್ತಾನ ಒಡ್ಡಿದ 177 ರನ್ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಗೆಲುವಿಗೆ ಕೊನೆಯ ಎರಡು ಓವರ್‌ಗಳಲ್ಲಿ 22 ರನ್‌ಗಳು ಅಗತ್ಯವಿತ್ತು. ಶಾಹೀನ್ ಅಫ್ರಿದಿ ಎಸೆದ ಇನ್ನಿಂಗ್ಸ್‌ನ 19ನೇ ಓವರ್‌ನಲ್ಲಿ ಹ್ಯಾಟ್ರಿಕ್ಸಿಕ್ಸರ್ ಬಾರಿಸಿದ ಮ್ಯಾಥ್ಯೂ ವೇಡ್, ಆಸೀಸ್‌ಗೆ ರೋಚಕ ಗೆಲುವು ಒದಗಿಸಿಕೊಡುವಲ್ಲಿ ನೆರವಾಗಿದ್ದರು.

ಇದನ್ನೂ ಓದಿ:ಟಿ20 ವಿಶ್ವಕಪ್ ಫೈನಲ್: ‘ಮೊದಲ ಕಿರೀಟ’ದತ್ತ ಕೇನ್–ಫಿಂಚ್ ಚಿತ್ತ

19ನೇ ಓವರ್‌ನ ಮೂರನೇ ಎಸೆತದಲ್ಲಿ ಮ್ಯಾಥ್ಯೂ ವೇಡ್ ಅವರ ಕ್ಯಾಚ್ ಅನ್ನು ಹಸನ್ ಅಲಿ ಕೈಚೆಲ್ಲಿದ್ದರು. ಇದುವೇ ಪಾಕಿಸ್ತಾನ ಸೋಲಿಗೆ ಕಾರಣ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬೆನ್ನಲ್ಲೇಹಸನ್ ಅಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.