ಬೆನೋನಿ: 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಗೆಲುವಿಗೆ 245 ರನ್‌ಗಳ ಅವಶ್ಯಕತೆಯಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಅತಿಥೇಯ ದಕ್ಷಿಣ ಆಫ್ರಿಕಾ ನಿಗದಿತ 50 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 244 ರನ್ ಗಳಿಸಿತು.

ಆರಂಭಿಕ ಬ್ಯಾಟರ್ ಲುವಾನ್ ಡ್ರೆ ಪ್ರಿಟೋರಿಯಸ್ (76) ಹಾಗೂ ರಿಚರ್ಡ್ ಸೆಲೆಸ್ವಾನ್ (64) ಆಕರ್ಷಕ ಅರ್ಧಶತಕ ಗಳಿಸಿ ತಂಡವು ಸವಾಲಿನ ಮೊತ್ತ ಪೇರಿಸಲು ನೆರವಾದರು.

ಒಲಿವರ್ ವೈಟ್‌ಹೆಡ್ (22), ನಾಯಕ ಜುವಾನ್ ಜೇಮ್ಸ್ (24) ಹಾಗೂ ಟ್ರಿಸ್ಟನ್ ಲಿಸ್ (23*) ಉಪಯುಕ್ತ ಕಾಣಿಕೆ ನೀಡಿದರು.

ಭಾರತದ ಪರ ರಾಜ್ ಲಿಂಬಾನಿ ಮೂರು, ಮುಶೀರ್ ಖಾನ್ ಎರಡು ಮತ್ತು ಸೌಮಿ ಪಾಂಡೆ ಹಾಗೂ ನಮನ್ ತಿವಾರಿ ತಲಾ ಒಂದು ವಿಕೆಟ್ ಗಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.