ಆಕ್ಲೆಂಡ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಭಾರತ ಆರಂಭಿಕ ಆಘಾತಕ್ಕೊಳಗಾಗಿದೆ.

ನ್ಯೂಜಿಲೆಂಡ್ನ ಈಡನ್ ಪಾರ್ಕ್ ಮೈದಾನದಲ್ಲಿ ಆರಂಭವಾಗಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು.

ಇದನ್ನೂ ಓದಿ:ICC Womens World Cup: ಭಾರತಕ್ಕೆ ಅಜೇಯ ಆಸ್ಟ್ರೇಲಿಯಾದ ಸವಾಲು

ಭಾರತದ ಆರಂಭ ಉತ್ತಮವಾಗಿರಲಿಲ್ಲ. ಆರು ಓವರ್ಗಳಲ್ಲಿ 28 ರನ್ ಗಳಿಸುವಷ್ಟರಲ್ಲಿ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂದಾನ (10) ಹಾಗೂ ಶಫಾಲಿ ವರ್ಮಾ (12) ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಆಡಿರುವ ನಾಲ್ಕು ಪಂದ್ಯಗಳಲ್ಲಿ ಎರಡು ಗೆದ್ದು, ಇನ್ನೆರಡರಲ್ಲಿ ಸೋತಿರುವ ಮಿಥಾಲಿ ರಾಜ್ ಬಳಗವು, ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಸೆಮಿಫೈನಲ್ ಪ್ರವೇಶಿಸುವ ಅವಕಾಶವನ್ನು ಉಳಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.