ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 4-1ರ ಅಂತರದಲ್ಲಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭದ್ರವಾಗಿಸಿದೆ.

ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತ್ತು. ಈಗ ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲ್ಲುವುದರೊಂದಿಗೆ ಮಹತ್ವದ 12 ಅಂಕಗಳನ್ನು ಗಳಿಸಿದೆ. ಇದರೊಂದಿಗೆ ಒಟ್ಟು ಅಂಕ 74ಕ್ಕೆ ಏರಿಕೆಯಾಗಿದೆ.

ರೋಹಿತ್ ಶರ್ಮಾ ಬಳಗ ಶೇಕಡಾವಾರು ಅಂಕ 64.58ರಿಂದ 68.51ಕ್ಕೆ ವೃದ್ಧಿಸಿಕೊಂಡಿದೆ. ಆ ಮೂಲಕ ತನ್ನ ಸ್ಥಾನವನ್ನು ಮತ್ತಷ್ಟು ಉತ್ತಮಪಡಿಸಿದೆ. ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ 60ರ ಪರ್ಸಂಟೇಜ್ ಹೊಂದಿದೆ.

ಎರಡು ಬಾರಿಯ ರನ್ನರ್-ಅಪ್ ಭಾರತ, 2023-25ರ ಡಬ್ಲ್ಯುಟಿಸಿ ಋತುವಿನಲ್ಲಿ ಈವರೆಗೆ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಆರು ಗೆಲುವುಗಳನ್ನು ದಾಖಲಿಸಿದೆ. ಎರಡಲ್ಲಿ ಸೋಲು ಮತ್ತು ಒಂದರಲ್ಲಿ ಡ್ರಾ ಕಂಡಿದೆ.

ಮತ್ತೊಂದೆಡೆ ಮೊದಲ ಪಂದ್ಯವನ್ನು ಗೆದ್ದರೂ ಬಳಿಕ ಸತತ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿರುವ ಇಂಗ್ಲೆಂಡ್ ಎಂಟನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಈವರೆಗೆ ಆಡಿರುವ 10 ಪಂದ್ಯಗಳ ಪೈಕಿ ಆರರಲ್ಲಿ ಪರಾಭವಗೊಂಡಿದೆ. ಶೇಕಡಾವಾರು ಪಾಯಿಂಟ್ಸ್ 17.5 ಹೊಂದಿದೆ.
.100ನೇ ಟೆಸ್ಟ್ ಪಂದ್ಯದಲ್ಲಿ ಕುಂಬ್ಳೆ, ಕಪಿಲ್ ದಾಖಲೆ ಮುರಿದ ಅಶ್ವಿನ್.IND VS ENG: ಭಾರತಕ್ಕೆ ಇನಿಂಗ್ಸ್ ಹಾಗೂ 64 ರನ್ ಜಯ; ಸರಣಿ 4-1ರಲ್ಲಿ ಕೈವಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.