ಪೋರ್ಟ್ ಆಫ್ ಸ್ಪೇನ್(ಟ್ರಿನಿಡಾಡ್): ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಮಿಂಚಿದ್ದ ಆಲ್‌ರೌಂಡರ್ ಅಕ್ಷರ್ ಪಟೇಲ್ 35 ಎಸೆತಗಳಲ್ಲಿ 64 ರನ್ ಸಿಡಿಸಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದರು.

ಅಕ್ಷರ್ ಪಟೇಲ್ ಅವರ ಅಮೋಘ ಆಟದಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್‌ಗಳಿದ್ದವು. 7ನೇ ಕ್ರಮಾಂಕದಲ್ಲಿ ಅವರು ಪ್ರದರ್ಶಿಸಿದ ಈ ಆಟ ಇದೀಗ ಹೊಸ ದಾಖಲೆ ಬರೆದಿದೆ.

ಹೌದು, ಭಾರತಕ್ಕೆ ಕೊನೆಯ ಮೂರು ಎಸೆತಗಳಲ್ಲಿ 6 ರನ್ ಬೇಕಿದ್ದಾಗ ಕೈಲ್ ಮೇಯರ್ ಎಸೆದ ಫುಲ್ ಟಾಸ್ ಎಸೆತವನ್ನು ಸಿಕ್ಸರ್ ಎತ್ತಿದ್ದ ಅಕ್ಷರ್ ಪಟೇಲ್ ಭಾರತಕ್ಕೆ ರೋಚಕ ಗೆಲುವು ತಂದು ಕೊಡುವ ಜೊತೆಗೆ ಮಾಜಿ ನಾಯಕ ಎಂ.ಎಸ್. ಧೋನಿ ಅವರ 17 ವರ್ಷಗಳ ದಾಖಲೆಯನ್ನು ಮುರಿದರು.

ಅಕ್ಷರ್ ಪಟೇಲ್ ಸಿಡಿಸಿದ 5 ಸಿಕ್ಸರ್ ಏಕದಿನ ಕ್ರಿಕೆಟ್‌ನ ಚೇಸಿಂಗ್‌ನಲ್ಲಿ7ನೇ ಕ್ರಮಾಂಕದ ಅಥವಾ ಅದಕ್ಕಿಂತ ಕೆಳ ಕ್ರಮಾಂಕದ ಬ್ಯಾಟರ್ ಒಬ್ಬ ಸಿಡಿಸಿದ ಅತ್ಯಧಿಕ ಸಿಕ್ಸರ್‌ಗಳಾಗಿವೆ.

2005ರ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೂರು ಸಿಕ್ಸರ್ ಸಿಡಿಸಿದ್ದ ಧೋನಿ ಹೆಸರಲ್ಲಿ ಈ ದಾಖಲೆ ಇತ್ತು. 2011ರಲ್ಲಿ ಯೂಸುಫ್ ಪಠಾಣ್ ಎರಡು ಬಾರಿ ದಾಖಲೆ ಸರಿಗಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.