ನವದೆಹಲಿ: ಗಾಯದಿಂದ ಮುಕ್ತಗೊಂಡು ರಣಜಿ ಟ್ರೋಫಿಯಲ್ಲಿ ಒಂದು ಪಂದ್ಯವನ್ನು ಆಡಿ ತಮ್ಮ ಫಿಟ್ನೆಸ್ ಸಾಬೀತು ಮಾಡಿರುವ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ, ಬಹುನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾಗವಹಿಸಲು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲು ಸಾಧ್ಯತೆ ಇದೆ.

ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮೊಹಮ್ಮದ್ ಶಮಿ ಸಹ ಪ್ರಯಾಣ ಬೆಳೆಸಲಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು 'ಎನ್ಡಿಟಿವಿ' ವರದಿ ಮಾಡಿದೆ.

ಮಧ್ಯಪ್ರದೇಶ ವಿರುದ್ಧ ನಡೆದ ರಣಜಿ ಪಂದ್ಯದಲ್ಲಿ ಬಂಗಾಳದ 11 ರನ್ ಅಂತರದ ರೋಚಕ ಗೆಲುವಿನಲ್ಲಿ ಶಮಿ ಮಹತ್ವದ ಪಾತ್ರ ವಹಿಸಿದ್ದರು. 43.2 ಓವರ್ಗಳಲ್ಲಿ ಏಳು ವಿಕೆಟ್ ಗಳಿಸಿ ತಮ್ಮ ಫಿಟ್ನೆಸ್ ಸಹ ಸಾಬೀತುಪಡಿಸಿದ್ದರು.

ಎರಡನೇ ಮಗುವಿನ ಜನನದ ಹಿನ್ನೆಲೆಯಲ್ಲಿ ನಾಯಕ ರೋಹಿತ್ ಶರ್ಮಾ ಅವರ ಆಸ್ಟ್ರೇಲಿಯಾ ಪ್ರವಾಸ ವಿಳಂಬಗೊಂಡಿತ್ತು. ಇದರಿಂದಾಗಿ ಮೊದಲ ಪಂದ್ಯದಲ್ಲಿ ಆಡುವುದಿಲ್ಲವೆಂದೂ ಹೇಳಲಾಗಿತ್ತು. ಆದರೆ ಈಗ ಅವರು ಪರ್ತ್ಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಂಡದಲ್ಲಿ ಶಮಿ ಸೇರ್ಪಡೆಯ ಕುರಿತು ಬಿಸಿಸಿಐಯಿಂದ ಅಧಿಕೃತ ಪ್ರಕಟಣೆ ಬಂದಿಲ್ಲ.

ತಂಡದಲ್ಲಿರುವ ವೇಗಿಗಳು:

ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆಕಾಶ್ ದೀಪ್, ಹರ್ಷೀತ್ ರಾಣಾ
.ಎರಡನೇ ಮಗುವಿಗೆ ತಂದೆಯಾದ ರೋಹಿತ್; ಪರ್ತ್ ಟೆಸ್ಟ್ ಪಂದ್ಯದಲ್ಲಿ ಆಡುವ ಸಾಧ್ಯತೆ.ಅಡಿಲೇಡ್ನಲ್ಲಿ 36, ಬೆಂಗಳೂರಿನಲ್ಲಿ 46: ಟೀಮ್ ಇಂಡಿಯಾ ಕಳಪೆ ಸಾಧನೆಗಳ ಪಟ್ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.