ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಡಿಸೆಂಬರ್ 26ರಂದು ಪ್ರವಾಸಿ ಭಾರತ ವಿರುದ್ಧಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಿಂದಲೂ ಗಾಯದ ಸಮಸ್ಯೆ ಎದುರಿಸುತ್ತಿರುವ ಆಸ್ಟ್ರೇಲಿಯಾದ ಎಡಗೈ ಅನುಭವಿ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಹೊರಗುಳಿಯಲಿದ್ದಾರೆ.

ಭಾರತ ವಿರುದ್ಧ ನಡೆದ ಏಕದಿನ ಸರಣಿ ವೇಳೆಯಲ್ಲಿ ಡೇವಿಡ್ ವಾರ್ನರ್ ತೊಡೆ ಸಂದು ಗಾಯಕ್ಕೊಳಗಾಗಿದ್ದರು. ಇದರಿಂದಾಗಿ ಅಡಿಲೇಡ್ನಲ್ಲಿ ನಡೆದ ಮೊದಲ ಪಂದ್ಯದಲ್ಲೂ ಆಡಿರಲಿಲ್ಲ.

ಈಗ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಡೇವಿಡ್ ವಾರ್ನರ್ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಕಂಡುಬರುವ ಸಾಧ್ಯತೆಯಿಲ್ಲ. ಹಾಗೆಯೇ ಜೋ ಬರ್ನ್ಸ್ ಹಾಗೂ ಮ್ಯಾಥ್ಯೂ ವೇಡ್ ಆರಂಭಿಕರಾಗಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ:ಭಾರತ ಪುಟಿದೇಳುವ ಭರವಸೆ ಇಲ್ಲ: ಮಾರ್ಕ್ ವಾ

ವೇಗದ ಬೌಲರ್ ಸೀನ್ ಅಬೋಟ್ ಗಾಯದಿಂದ ಚೇತರಿಸಿಕೊಂಡರೂ ಸಹ ಆಯ್ಕೆಗೆ ಪರಿಗಣಿಸಿಲ್ಲ.

ಅಲ್ಲದೆ ಕಟ್ಟುನಿಟ್ಟಿನ ಕೋವಿಡ್-19 ಮಾನದಂಡಗಳನ್ನು ಪಾಲಿಸಲಾಗುತ್ತಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.

ಆಸ್ಟ್ರೇಲಿಯಾ ತಂಡ ಇಂತಿದೆ:
ಟಿಮ್ ಪೇನ್ (ನಾಯಕ), ಜೋ ಬರ್ನ್ಸ್, ಪ್ಯಾಟ್ ಕಮಿನ್ಸ್, ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಮೊಯಿಸೆಸ್ ಹೆನ್ರಿಕ್ಸ್, ಮಾರ್ನಸ್ ಲಾಬುಷೇನ್, ನಥನ್ ಲಿಯಾನ್, ಮೈಕಲ್ ನೆಸರ್, ಜೇಮ್ಸ್ ಪ್ಯಾಟಿನ್ಸನ್, ವಿಲ್ ಪುಕಾವ್ಸ್ಕಿ, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಮ್ಯಾಥ್ಯೂ ವೇಡ್ ಮತ್ತು ಡೇವಿಡ್ ವಾರ್ನರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.