ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಹುನಿರೀಕ್ಷಿತ ಟೆಸ್ಟ್ ಸರಣಿಗೂ ಪೂರ್ವ ಸಿದ್ಧತೆಗಾಗಿ ಆಸ್ಟ್ರೇಲಿಯಾ 'ಎ' ವಿರುದ್ಧ ಅಹರ್ನಿಶಿಯಾಗಿ ಸಾಗುತ್ತಿರುವ ಎರಡನೇ ಅಭ್ಯಾಸ ಪಂದ್ಯದ ಮೊದಲ ದಿನದಾಟದಲ್ಲಿ, ಜಸ್‌ಪ್ರೀತ್ ಬೂಮ್ರಾ ಚೊಚ್ಚಲ ಪ್ರಥಮ ದರ್ಜೆ ಕ್ರಿಕೆಟ್ ಅರ್ಧಶತಕದ ಹೊರತಾಗಿಯೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಭಾರತ ತಂಡವು 48.3 ಓವರ್‌ಗಳಲ್ಲಿ 194 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಆಡಿಲೇಡ್‌ನಲ್ಲಿ ನಡೆಯಲಿರುವ ಅಹರ್ನಿಶಿ ಪಂದ್ಯವನ್ನು ಗುರಿಯಾಗಿರಿಸಿಕೊಂಡು ಡೇ-ನೈಟ್ ಅಭ್ಯಾಸ ಪಂದ್ಯವನ್ನು ಆಯೋಜಿಸಲಾಗಿದೆ. ಈ ಪಂದ್ಯದಲ್ಲಿ ಆಡದಿರಲು ನಿರ್ಧರಿಸಿರುವ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ. ಚೇತೇಶ್ವರ ಪೂಜಾರ ಕೂಡಾ ವಿಶ್ರಾಂತಿ ಪಡೆದಿದ್ದಾರೆ.

ಇದನ್ನೂ ಓದಿ:ರೋಹಿತ್ ಶರ್ಮಾ ಫಿಟ್; ಆಸೀಸ್ ವಿಮಾನವನ್ನೇರಲಿರುವ 'ಹಿಟ್ಮ್ಯಾನ್'

ನಾಯಕನ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಿದ್ದರು. ಆರಂಭಿಕರಾದ ಮಯಂಕ್ ಅಗರವಾಲ್ (2) ನಿರಾಸೆ ಮೂಡಿಸಿದರು. ಪೃಥ್ವಿ ಶಾ ಹಾಗೂ ಶುಭಮನ್ ಗಿಲ್ ದ್ವಿತೀಯ ವಿಕೆಟ್‌ಗೆ 63 ರನ್‌ಗಳ ಜೊತೆಯಾಟ ನೀಡಿದ್ದರು.

ಆದರೆ ಸೆಟ್ ಬ್ಯಾಟ್ಸ್‌ಮನ್‌ಗಳಾದ ಪೃಥ್ವಿ ಶಾ (40), ಶುಭಮನ್ ಗಿಲ್ (43) ವಿಕೆಟ್‌ಗಳನ್ನು ಕಳೆದುಕೊಂಡ ಭಾರತ ಸಂಕಷ್ಟಕ್ಕೆ ಸಿಲುಕಿತ್ತು. ಹನುಮ ವಿಹಾರಿ (15), ನಾಯಕ ಅಜಿಂಕ್ಯ ರಹಾನೆ (4), ರಿಷಬ್ ಪಂತ್ (5) ಹಾಗೂ ವೃದ್ಧಿಮಾನ್ ಸಹಾ (0) ಅವರಿಗೂ ಮಿಂಚಲಾಗಲಿಲ್ಲ.

ಇದನ್ನೂ ಓದಿ:ಮುಂಬೈ ಇಂಡಿಯನ್ಸ್ ತಂಡಕ್ಕೆ ಪಾರ್ಥಿವ್ ಪ್ರತಿಭಾ ಶೋಧಕ

ಇದಾದ ಬೆನ್ನಲ್ಲೇ ನವದೀಪ್ ಸೈನಿ (4) ಹಾಗೂ ಮೊಹಮ್ಮದ್ ಶಮಿ (0) ವಿಕೆಟ್‌ಗಳನ್ನು ಕಳೆದುಕೊಂಡ ಭಾರತ 123 ರನ್ ಗಳಿಸುವಷ್ಟರಲ್ಲಿ ಒಂಬತ್ತು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಜೊತೆಗೂಡಿದಜಸ್‌ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಕೊನೆಯ ವಿಕೆಟ್‌ಗೆ 71 ರನ್‌ಗಳ ಜೊತೆಯಾಟ ನೀಡಿ ತಂಡದ ಮೊತ್ತವನ್ನು 200ರ ಸನಿಹಕ್ಕೆ ತಲುಪಿಸಿದರು.

ಈ ಪೈಕಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಚೊಚ್ಚಲ ಅರ್ಧಶತಕ ಸಾಧನೆ ಮಾಡಿರುವ ಜಸ್‌ಪ್ರೀತ್ ಬುಮ್ರಾ 57 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 55 ರನ್ ಗಳಿಸಿ ಅಜೇಯರಾಗುಳಿದರು. ಇವರಿಗೆ ತಕ್ಕ ಸಾಥ್ ನೀಡಿದ ಮೊಹಮ್ದಮ್ ಸಿರಾಜ್ 34 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 22 ರನ್ ಗಳಿಸಿದರು.

ಇದನ್ನೂ ಓದಿ:ICC Rankings: ಕೊಹ್ಲಿ ಅಗ್ರ, ರೋಹಿತ್ ನಂ. 2; ಟಾಪ್ 50ರ ಪಟ್ಟಿಗೆ ಪಾಂಡ್ಯ

ಅಂತಿಮವಾಗಿ ಭಾರತ 194 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಆಸೀಸ್ ಪರ ಸೀನ್ ಅಬಾಟ್ ಹಾಗೂ ಜ್ಯಾಕ್ ವೈಲ್ಡರ್‌ಮುತ್ ತಲಾ ಮೂರು ವಿಕೆಟ್‌ಗಳನ್ನು ಕಿತ್ತರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.