ಇಂದೋರ್: ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದ ಭಾರತ ತಂಡವು ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಚಿತ್ತ ನೆಟ್ಟಿದೆ.

ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವು 1–0 ಮುನ್ನಡೆ ಸಾಧಿಸಿದೆ. ಭಾನುವಾರ ಹೋಳ್ಕರ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆದ್ದು ಸರಣಿಯನ್ನು ತನ್ನ ಮಡಿಲಿಗೆ ಹಾಕಿಕೊಳ್ಳುವ ಉತ್ಸಾಹದಲ್ಲಿದೆ.

ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊಹಮ್ಮದ್ ಶಮಿ ಐದು ವಿಕೆಟ್ ಗೊಂಚಲು ಗಳಿಸಿ ಮಿಂಚಿದ್ದರು. ಬ್ಯಾಟಿಂಗ್‌ನಲ್ಲಿ ಶುಭಮನ್ ಗಿಲ್, ಋತುರಾಜ್ ಗಾಯಕವಾಡ, ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅವರು ಅರ್ಧಶತಕ ಗಳಿಸಿ ಗುರಿಯನ್ನು ಸುಲಭವಾಗಿ ಸಾಧಿಸಿದ್ದರು.

ಆದರೆ ಶ್ರೇಯಸ್ ಅಯ್ಯರ್ ಮಾತ್ರ ಎಡವಿದರು. ಅವರು ಲಯಕ್ಕೆ ಮರಳಲು ಮತ್ತೊಂದು ಅವಕಾಶ ಇಂದೋರ್‌ನಲ್ಲಿ ಸಿಗುವುದು ಬಹುತೇಕ ಖಚಿತ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲದೀಪ್ ಯಾದವ್ ಅವರು ವಿಶ್ರಾಂತಿ ಪಡೆದಿದ್ದಾರೆ. ಸರಣಿಯ ಮೂರನೇ ಪಂದ್ಯಕ್ಕೆ ಅವರು ಮರಳುವರು. ಮುಂದಿನ ತಿಂಗಳು ನಡೆಯುವ ವಿಶ್ವಕಪ್ ಟೂರ್ನಿಗೆ ಪೂರ್ವಭಾವಿ ಸಿದ್ಧತೆ ಎಂದೇ ಪರಿಗಣಿಸಲಾಗಿರುವ ಈ ಸರಣಿಯ ಗೆಲುವು ತಂಡದ ಆತ್ಮಬಲ ವೃದ್ಧಿಸುವುದರಲ್ಲಿ ಸಂಶಯವಿಲ್ಲ.

ದೀರ್ಘಕಾಲದ ನಂತರ ಏಕದಿನ ಕ್ರಿಕೆಟ್ ತಂಡಕ್ಕೆ ಮರಳಿರುವ ಅನುಭವಿ ಆರ್. ಅಶ್ವಿನ್ ಅವರ ಮೇಲೂ ಆಯ್ಕೆ ಸಮಿತಿ ಕಣ್ಣಿಟ್ಟಿದೆ. ಆದರೆ ಶುಕ್ರವಾರ ನಡೆದಿದ್ದ ಪಂದ್ಯದಲ್ಲಿ ಅವರು ಆಸ್ಟ್ರೇಲಿಯಾ ಬ್ಯಾಟರ್‌ಗಳಿಗೆ ಕಠಿಣ ಸವಾಲೊಡ್ಡುವಲ್ಲಿ ಯಶಸ್ವಿಯಾಗಲಿಲ್ಲ.

ಪ್ರವಾಸಿ ತಂಡದಲ್ಲಿ ಡೇವಿಡ್ ವಾರ್ನರ್, ಲಯಕ್ಕೆ ಮರಳಿದ್ದಾರೆ. ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಷೇನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಅವರು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಲಾಢ್ಯವಾಗಲು ಕಾರಣರಾಗಿದ್ದಾರೆ. ಅವರನ್ನು ಕಟ್ಟಿಹಾಕುವುದು ಬೌಲರ್‌ಗಳ ಮುಂದಿರುವ ಪ್ರಮುಖ ಸವಾಲು.

ವೇಗಿ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್‌ನಲ್ಲಿಯೂ ಮಿಂಚುತ್ತಿರುವುದು ಆಸ್ಟ್ರೇಲಿಯಾ ತಂಡಕ್ಕೆ ಸಮಾಧಾನಕರ ಸಂಗತಿ. ಸ್ಪಿನ್ನರ್ ಆ್ಯಡಂ ಜಂಪಾ, ವೇಗಿ ಜೋಷ್ ಹ್ಯಾಜಲ್‌ವುಡ್ ಅವರು ಭಾರತದ ಬ್ಯಾಟರ್‌ಗಳನ್ನು ಕಾಡಲು ಸಿದ್ಧರಾಗಿದ್ದಾರೆ. ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಜಯಿಸಿದರೆ ಸರಣಿ ಜಯದ ಕನಸು ಜೀವಂತವಾಗುಳಿಯಲಿದೆ. ಅಲ್ಲದೇ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಹಾಗೂ ಕೊನೆಯ ಪಂದ್ಯವು ರೋಚಕವಾಗಲಿದೆ.

ಪಂದ್ಯ ಆರಂಭ:ಮಧ್ಯಾಹ್ನ 1.30

ನೇರಪ್ರಸಾರ: ಸ್ಪೋರ್ಟ್ಸ್ 18, ಜಿಯೊ ಸಿನಿಮಾ ಆ್ಯಪ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.