ಚೆನ್ನೈ: ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ 400 ಅಂತರರಾಷ್ಟ್ರೀಯ ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಆ ಮೂಲಕ ಈ ಸಾಧನೆ ಮಾಡಿದ ಭಾರತದ ಆರನೇ ವೇಗದ ಬೌಲರ್ ಎನಿಸಿದ್ದಾರೆ. ಒಟ್ಟಾರೆಯಾಗಿ ಭಾರತದ ಪರ 400 ವಿಕೆಟ್ ಗಳಿಸಿದ 10ನೇ ಬೌಲರ್ ಎಂಬ ಗೌರವಕ್ಕೆ ಭಾಜನರಾಗಿದ್ದಾರೆ.

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಬೂಮ್ರಾ ಮಿಂಚಿನ ದಾಳಿ ಸಂಘಟಿಸಿದರು.

400 ವಿಕೆಟ್‌ಗಳ ಪೈಕಿ ಬೂಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 162 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಏಕದಿನದಲ್ಲಿ 149 ಹಾಗೂ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 89 ವಿಕೆಟ್‌ಗಳನ್ನು ಪಡೆದಿದ್ದಾರೆ.

ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಮುಂಚೂಣಿಯಲ್ಲಿದ್ದಾರೆ. ಕುಂಬ್ಳೆ ಒಟ್ಟು 953 ವಿಕೆಟ್‌ಗಳನ್ನು ಗಳಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ ಒಟ್ಟು 744 ವಿಕೆಟ್ ಪಡೆದಿದ್ದಾರೆ.

ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿ:

1. ಅನಿಲ್ ಕುಂಬ್ಳೆ: 953

2. ಆರ್. ಅಶ್ವಿನ್: 744

3. ಹರಭಜನ್ ಸಿಂಗ್: 707

4. ಕಪಿಲ್ ದೇವ್: 687

5. ಜಹೀರ್ ಖಾನ್: 597

6. ರವೀಂದ್ರ ಜಡೇಜ: 570

7. ಜಾವಗಲ್ ಶ್ರೀನಾಥ್: 551

8. ಮೊಹಮ್ಮದ್ ಶಮಿ: 448

9. ಇಶಾಂತ್ ಶರ್ಮಾ: 434

10. ಜಸ್‌ಪ್ರೀತ್ ಬೂಮ್ರಾ: 400
.IND vs BAN 1st Test | ರೋಹಿತ್, ಕೊಹ್ಲಿ ಪತನ; ಭಾರತಕ್ಕೆ 308 ರನ್ ಮುನ್ನಡೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.