ಹೈದರಾಬಾದ್: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯ ಇಂದು ಹೈದರಾಬಾದ್ನಲ್ಲಿ ನಡೆಯಲಿದೆ.

ಮೊದಲೆರಡು ಪಂದ್ಯಗಳಲ್ಲಿ ಜಯ ಗಳಿಸಿರುವ ಸೂರ್ಯಕುಮಾರ್ ಯಾದವ್ ಬಳಗವು ಮೂರು ಪಂದ್ಯಗಳ ಟಿ20 ಸರಣಿಯನ್ನು ಈಗಾಗಲೇ 2-0ರ ಅಂತರದಲ್ಲಿ ವಶಪಡಿಸಿಕೊಂಡಿದೆ.

ಯುವ ಆಟಗಾರರನ್ನು ಒಳಗೊಂಡ ಭಾರತ ತಂಡವೀಗ ಅಂತಿಮ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ಸ್ವೀಪ್ ಮಾಡುವ ಇರಾದೆಯಲ್ಲಿದೆ.

ಮೊದಲೆರಡು ಪಂದ್ಯಗಳಲ್ಲಿ ರವಿ ಬಿಷ್ಣೋಯಿ, ಜಿತೇಶ್ ಶರ್ಮಾ, ಹರ್ಷೀತ್ ರಾಣಾ ಮತ್ತು ತಿಲಕ್ ವರ್ಮಾ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಹಾಗಾಗಿ ಈ ಪಂದ್ಯದಲ್ಲಿ ಕೆಲವೊಂದು ಬದಲಾವಣೆಗಳನ್ನು ನಿರೀಕ್ಷೆ ಮಾಡಬಹುದಾಗಿದೆ.

ಗ್ವಾಲಿಯರ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಮತ್ತು ದೆಹಲಿಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ 86 ರನ್ ಅಂತರದ ಜಯ ದಾಖಲಿಸಿತ್ತು.

ಟಿ20 ಸರಣಿಗೂ ಮುನ್ನ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಭಾರತ 2-0ರ ಅಂತರದ ಕ್ಲೀನ್ಸ್ವೀಪ್ ಸಾಧನೆಗೈದಿತ್ತು.

ಭಾರತ ತಂಡ ಇಂತಿದೆ:

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅರ್ಷದೀಪ್ ಸಿಂಗ್, ಹರ್ಷೀತ್ ರಾಣಾ, ಮಯಂಕ್ ಯಾದವ್, ತಿಲಕ್ ವರ್ಮಾ.
.ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ; ಬೂಮ್ರಾ ಉಪನಾಯಕ.IND v BAN T20:ನಿತೀಶ್-ರಿಂಕು ಅಬ್ಬರದ ಅರ್ಧಶತಕ; ಬಾಂಗ್ಲಾ ವಿರುದ್ಧ ಭಾರತಕ್ಕೆ ಜಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.