ಅಹಮದಾಬಾದ್: ಶ್ರೇಯಸ್ ಅಯ್ಯರ್ ಅರ್ಧಶತಕದ (67) ಹೊರತಾಗಿಯೂ ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟ್ವೆಂಟಿ-20 ಅಂತರ ರಾಷ್ಟ್ರೀಯ ಪಂದ್ಯದಲ್ಲಿ ಭಾರತ ತಂಡವು ನಿಗದಿತ 20 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 124 ರನ್ ಗಳಿಸಲಷ್ಟೇ ಶಕ್ತವಾಗಿದೆ.

ಈ ಮೂಲಕ ಎದುರಾಳಿಗಳಿಗೆ 125 ರನ್ಗಳ ಸುಲಭ ಗೆಲುವಿನ ಗುರಿ ಒಡ್ಡಿದೆ.

ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ಗಿಳಿಸಲ್ಪಟ್ಟ ಭಾರತದ ಆರಂಭ ಉತ್ತಮವಾಗಿರಲಿಲ್ಲ. ತಂಡವು 20 ರನ್ ಗಳಿಸುವಷ್ಟರಲ್ಲೇ ಪ್ರಮುಖ ಮೂರು ವಿಕೆಟ್ಗಳನ್ನು ಕಳೆದುಕೊಂಡಿತ್ತು.

ಜೋಫ್ರಾ ಆರ್ಚರ್ ದಾಳಿಯಲ್ಲಿ (1) ಕೆಎಲ್ ರಾಹುಲ್ ಕ್ಲೀನ್ ಬೌಲ್ಡ್ ಆದರು. ನಾಯಕ ವಿರಾಟ್ ಕೊಹ್ಲಿ (0) ಖಾತೆ ತೆರೆಯಲಾಗಲಿಲ್ಲ. ಶಿಖರ್ ಧವನ್ 12 ಎಸೆತಗಳಲ್ಲಿ ಬರಿ 4 ರನ್ ಗಳಿಸಿ ನಿರಾಸೆ ಮೂಡಿಸಿದರು.

ಇನ್ನೊಂದೆಡೆ ರಿಷಭ್ ಪಂತ್ (21) ಟೆಸ್ಟ್ ಸರಣಿಯಲ್ಲಿನ ಉತ್ತಮ ಫಾರ್ಮ್ ಮುಂದುವರಿಸುವ ಪ್ರಯತ್ನ ಮಾಡಿದರು. ಆದರೆ ಬೆನ್ ಸ್ಟೋಕ್ಸ್ ಬಲೆಗೆ ಬೀಳುವುದರೊಂದಿಗೆ 10 ಓವರ್ಗಳಲ್ಲಿ 48 ರನ್ನಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಇದನ್ನೂ ಓದಿ:ರನ್ ಬರ ಎದುರಿಸುತ್ತಿರುವ 'ರನ್ ಮೆಷಿನ್'; ಕೊಹ್ಲಿ ಮತ್ತೆ ಶೂನ್ಯಕ್ಕೆ ಔಟ್!

ಈ ಹಂತದಲ್ಲಿ ಜೊತೆಗೂಡಿದ ಶ್ರೇಯಸ್ ಅಯ್ಯರ್ ಹಾಗೂ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಿದರು. ಸಮಯೋಚಿತ ಇನ್ನಿಂಗ್ಸ್ ಕಟ್ಟಿದ ಅಯ್ಯರ್ ಭಾರತವನ್ನು ಸ್ಪರ್ಧಾತ್ಮಕ ಮೊತ್ತದತ್ತ ಮುನ್ನಡೆಸಿದರು.

ಶ್ರೇಯಸ್ ಹಾಗೂ ಪಾಂಡ್ಯ ಐದನೇ ವಿಕೆಟ್ಗೆ 54 ರನ್ಗಳ ಮಹತ್ವದ ಜೊತೆಯಾಟ ನೀಡಿದರು. ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಅಯ್ಯರ್ ಅರ್ಧಶತಕ ಸಾಧನೆ ಮಾಡಿದರು.

ಕೊನೆಯ ಹಂತದಲ್ಲಿ ರನ್ ಏರಿಸುವ ಭರದಲ್ಲಿ ಹಾರ್ದಿಕ್ ಪಾಂಡ್ಯ (19) ವಿಕೆಟ್ ಒಪ್ಪಿಸಿದರು. ಶಾರ್ದೂಲ್ ಠಾಕೂರ್ (0) ನಿರಾಸೆ ಮೂಡಿಸಿದರು.

ಅಂತಿಮವಾಗಿ ಭಾರತಕ್ಕೆ 124 ರನ್ ಗಳಿಸಲಷ್ಟೇ ಸಾಧ್ಯವಾಯಿತು. 48 ಎಸೆತಗಳನ್ನು ಎದುರಿಸಿದ ಅಯ್ಯರ್ ಎಂಟು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 67 ರನ್ ಗಳಿಸಿದರು. ಇನ್ನುಳಿದಂತೆ ಅಕ್ಷರ್ ಪಟೇಲ್ (7*) ಹಾಗೂ ವಾಷಿಂಗ್ಟನ್ ಸುಂದರ್ (3*) ರನ್ ಗಳಿಸಿದರು.

ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ ಮೂರು ವಿಕೆಟ್ ಕಬಳಿಸಿ ಮಿಂಚಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.