ಕೆನ್ನಿಂಗ್ಟನ್ ಓವಲ್: ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದಶಾರ್ದೂಲ್ ಠಾಕೂರ್ (60) ಹಾಗೂ ರಿಷಭ್ ಪಂತ್ (50) ಸಮಯೋಚಿತ ಅರ್ಧಶತಕಗಳ ನೆರವಿನಿಂದ ಭಾರತ ತಂಡವು, ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ 148.2 ಓವರ್‌ಗಳಲ್ಲಿ 466 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಈ ಮೂಲಕ ಆತಿಥೇಯರಿಗೆ 368 ರನ್‌ಗಳ ಗೆಲುವಿನ ಗುರಿ ಒಡ್ಡಿದೆ. ಮೂರು ವಿಕೆಟ್ ನಷ್ಟಕ್ಕೆ 270 ಎಂಬ ಸ್ಕೋರ್‌ನಿಂದ ದಿನದಾಟ ಮುಂದುವರಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ರವೀಂದ್ರ ಜಡೇಜ (17) ಹಾಗೂ ಅಂಜಿಕ್ಯ ರಹಾನೆ (0) ನಿರಾಸೆ ಮೂಡಿಸಿದರು.

ಇದನ್ನೂ ಓದಿ:ರವಿ ಶಾಸ್ತ್ರಿಗೆ ಕೋವಿಡ್ ಪಾಸಿಟಿವ್: ಟೀಂ ಇಂಡಿಯಾದ ನಾಲ್ವರಿಗೆ ಪ್ರತ್ಯೇಕವಾಸ

ನಾಯಕ ವಿರಾಟ್ ಕೊಹ್ಲಿ 44 ರನ್ ಗಳಿಸಿ ಔಟಾದರು. ಇದರೊಂದಿಗೆ 312 ರನ್ನಿಗೆ ಆರು ವಿಕೆಟ್ ಕಳೆದುಕೊಂಡು ಹಿನ್ನಡೆಗೊಳಗಾಗಿತ್ತು.

ಈ ಹಂತದಲ್ಲಿ ಜೊತೆಗೂಡಿದ ಪಂತ್ ಹಾಗೂ ಶಾರ್ದೂಲ್ ಏಳನೇ ವಿಕೆಟ್‌ಗೆ ಅಮೂಲ್ಯ ಶತಕದ ಜೊತೆಯಾಟ ನೀಡಿದರು. 72 ಎಸೆತಗಳನ್ನು ಎದುರಿಸಿದ ಶಾರ್ದೂಲ್ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 60 ರನ್ ಗಳಿಸಿದರು. ಈ ಮೂಲಕ ಎರಡೂ ಇನ್ನಿಂಗ್ಸ್‌ಗಳಲ್ಲಿ ಫಿಫ್ಟಿ ಬಾರಿಸಿದ ಸಾಧನೆ ಮಾಡಿದರು. ಶಾರ್ದೂಲ್ ಮೊದಲ ಇನ್ನಿಂಗ್ಸ್‌ನಲ್ಲಿ57 ರನ್ ಗಳಿಸಿದರು.

ಅತ್ತ ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಪಂತ್ 106 ಎಸೆತಗಳಲ್ಲಿ ನಾಲ್ಕು ಬೌಂಡರಿ ನೆರವಿನಿಂದ 50 ರನ್ ಗಳಿಸಿದರು. ಕೊನೆ ಹಂತದಲ್ಲಿ ಉಮೇಶ್ ಯಾದವ್ (25) ಹಾಗೂ ಜಸ್‌ಪ್ರೀತ್ ಬೂಮ್ರಾ (24) ಉಪಯುಕ್ತ ಕೊಡುಗೆ ನೀಡುವ ಮೂಲಕ ಭಾರತದ ಮುನ್ನಡೆಯನ್ನು 350ರ ಗಡಿ ದಾಟಿಸಿದರು.

ಅಂತಿಮವಾಗಿ ಭಾರತ 466 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಇಂಗ್ಲೆಂಡ್ ಪರ ಕ್ರಿಸ್ ವೋಕ್ಸ್ ಮೂರು ವಿಕೆಟ್‌ಗಳನ್ನು ಕಬಳಿಸಿದರು.

ಮೂರನೇ ದಿನದಾಟದಲ್ಲಿ ರೋಹಿತ್ ಶರ್ಮಾ ಅಮೋಘ ಶತಕ (127) ಬಾರಿಸಿದೆರೆ ಚೇತೇಶ್ವರ್ ಪೂಜಾರ (61) ಹಾಗೂ ಕೆ.ಎಲ್. ರಾಹುಲ್ (46) ಆಕರ್ಷಕ ಇನ್ನಿಂಗ್ಸ್ ಕಟ್ಟಿದರು.

ಈ ಮುನ್ನ ಭಾರತದ 191 ರನ್‌ಗಳಿಗೆ ಉತ್ತರವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 290 ರನ್ ಗಳಿಸಿತ್ತು. ಈ ಮೂಲಕ 99 ರನ್‌ಗಳ ಮುನ್ನಡೆ ಗಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.