ಧರ್ಮಶಾಲಾ: ಹಿಮಾಲಯದ ಮಡಿಲಿನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 5 ವಿಕೆಟ್ ಪಡೆದಿದ್ದಾರೆ.

ಭಾರತ ಈ ಪಂದ್ಯದ ಗೆಲುವಿನ ಸನಿಹದಲ್ಲಿದೆ.

ಈ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಮೊದಲ ಇನ್ನಿಂಗ್ಸ್ನಲ್ಲಿ ನಾಲ್ಕು ವಿಕೆಟ್ ಪಡೆದಿದ್ದರು. ಎರಡನೇ ಇನ್ನಿಂಗ್ಸ್ನಲ್ಲೂ 5 ವಿಕೆಟ್ ಪಡೆದಿದ್ದಾರೆ.

ಈ ಕ್ರೀಡಾಂಗಣದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ಆಟಗಾರರ ದುರ್ಬಲ ಬ್ಯಾಟಿಂಗ್ ಹಾಗೂ ಕ್ಷೇತ್ರರಕ್ಷಣೆಯು ಅವರ ನೈತಿಕ ಬಲ ಕುಸಿದಿರುವುದರ ಸಂಕೇತದಂತೆ ಕಾಣುತ್ತಿದೆ.

ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 218 ರನ್ಗಳಿಗೆ ಆಲೌಟ್ ಆಗಿತ್ತು. ಭಾರತ ಮೊದಲ ಇನ್ನಿಂಗ್ಸ್ನಲ್ಲಿ 477 ರನ್ ಪೇರಿಸುವ ಮೂಲಕ ಭಾರಿ ಮುನ್ನಡೆ ಪಡೆದಿತ್ತು. ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ನಲ್ಲೂ ಕುಸಿತ ಕಂಡಿದೆ.

ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ನಲ್ಲಿ ಈ ವೇಳೆಗೆ 141 ರನ್ಗಳಿಗೆ 8 ವಿಕೆಟ್ ಕಳೆದುಕೊಂಡಿದೆ. 118 ರನ್ಗಳ ಹಿನ್ನಡೆ ಅನುಭವಿಸಿದೆ.

ಸ್ಕೋರ್...

ಇಂಗ್ಲೆಂಡ್: 218–10 ಮತ್ತು 141–6

ಭಾರತ: 477–10

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.