ಚೆನ್ನೈ:ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡ ಭಾರತ ತಂಡವನ್ನು ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಟ್ರೋಲ್ ಮಾಡಿದ್ದಾರೆ.

ಚೆನ್ನೈನಲ್ಲಿ ಮುಕ್ತಾಯವಾದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ 227 ರನ್ ಅಂತರದ ಸೋಲು ಅನುಭವಿಸಿದೆ. ಅದಾದ ಬಳಿಕ ಟ್ವೀಟ್ ಮಾಡಿರುವ ಪೀಟರ್ಸನ್, ‘ಭಾರತ, ಆಸ್ಟ್ರೇಲಿಯಾವನ್ನು ಅದರ ತವರಿನಲ್ಲೇಮಣಿಸಿದ ಬಳಿಕ ಅತಿಯಾದ ವಿಶ್ವಾಸದಿಂದ ಬೀಗಬೇಡಿ ಎಂದು ನಾನು ನಿಮಗೆ ಮೊದಲೇ ಎಚ್ಚರಿಕೆ ನೀಡಿದ್ದೆ ನೆನಪಿಸಿಕೊಳ್ಳಿʼ ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ:ಕನಿಷ್ಠ ಡ್ರಾ ಮಾಡಿಕೊಳ್ಳುವ ಅವಕಾಶವಿದ್ದ ಪಂದ್ಯ ಸೋತ ಭಾರತ

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ಮೊದಲ ಇನಿಂಗ್ಸ್ನಲಿ 578 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಭಾರತ 337 ರನ್ ಗಳಿಸಿ ಆಲೌಟ್ ಆಗಿತ್ತು. ಟೀಂ ಇಂಡಿಯಾಗೆ ಫಾಲೋಆನ್ ಹೇರದೆ ಎರಡನೇ ಇನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 178 ರನ್ಗಳಿಗೆ ಸರ್ವಪತನ ಕಂಡಿತ್ತು.

ಇದನ್ನೂ ಓದಿ:ಕೊಹ್ಲಿಗೆ ಸತತ ನಾಲ್ಕನೇ ಸೋಲು; ವಾನ್ ದಾಖಲೆ ಸರಿಗಟ್ಟಿದ ರೂಟ್

ಹೀಗಾಗಿ 420 ರನ್ಗಳ ಬೃಹತ್ ಗುರಿಎದುರು ಬ್ಯಾಟಿಂಗ್ ನಡೆಸಿದ ಭಾರತ 192 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕ ವಿರಾಟ್ ಕೊಹ್ಲಿ (72) ಮತ್ತು ಶುಭಮನ್ ಗಿಲ್ (50) ಅರ್ಧಶತಕ ಗಳಿಸಿ, ಅಲ್ಪ ಪ್ರತಿರೋಧ ತೋರಿದರು.

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿದ್ದ ಭಾರತ, ಸರಣಿಯನ್ನು 2-1 ಅಂತರದಿಂದ ಜಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.