ಮ್ಯಾಂಚೆಸ್ಟರ್: ಶುಕ್ರವಾರದಂದು ಆರಂಭವಾಗಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಟೆಸ್ಟ್ ಪಂದ್ಯಕ್ಕೆ ಕೋವಿಡ್ ಕರಿನೆರಳು ಆವರಿಸಿದೆ.

ಭಾರತ ಕ್ರಿಕೆಟ್ ತಂಡದ ಜೂನಿಯರ್ ಫಿಸಿಯೊ ಯೋಗೆೇಶ್ ಪರ್ಮಾರ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಇದನ್ನೂ ಓದಿ:ಟೀಮ್ ಇಂಡಿಯಾಗೆ ಧೋನಿ ಮಾರ್ಗದರ್ಶಕ: ಹಿತಾಸಕ್ತಿ ಸಂಘರ್ಷ ದೂರು

ಇದರಿಂದಾಗಿ ಟೀಮ್ ಇಂಡಿಯಾವು ತನ್ನ ಅಭ್ಯಾಸದ ಅವಧಿಯನ್ನು ರದ್ದುಗೊಳಿಸಿದೆ.

ಯೋಗೇಶ್ ಪರ್ಮಾರ್‌ಗೆ ಕೋವಿಡ್ ಸೋಂಕು ತಗುಲಿರುವುದನ್ನು ಬಿಸಿಸಿಐ ಖಚಿತಪಡಿಸಿದೆ.

ಟೀಮ್ ಇಂಡಿಯಾ ಆಟಗಾರರಲ್ಲಿ ಕೊಠಡಿಯಲ್ಲೇ ಉಳಿದುಕೊಳ್ಳಲು ಸೂಚಿಸಲಾಗಿದ್ದು, ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದೆ. ಇದರ ವರದಿ ಶುಕ್ರವಾರದಂದೇ ಲಭ್ಯವಾಗುವ ನಿರೀಕ್ಷೆಯಿದೆ.

ಓವಲ್ ಟೆಸ್ಟ್ ಸಂದರ್ಭದಲ್ಲಿ ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನ ಫಿಸಿಯೊ ನಿತಿನ್ ಪಟೇಲ್, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಪ್ರತ್ಯೇಕವಾಸದಲ್ಲಿರಲು ಸೂಚಿಸಲಾಗಿತ್ತು.

ಈ ಮಧ್ಯೆ ಹೆಚ್ಚುವರಿ ಫಿಸಿಯೊ ಒದಗಿಸುವಂತೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ವಿನಂತಿ ಮಾಡಿದೆ ಎಂಬುದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.