ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ–ಇಂಗ್ಲೆಂಡ್ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಕ್ರೀಡಾ ಸ್ಫೂರ್ತಿ ಮೆರೆದಿರುವುದಕ್ಕೆ ಬಿಸಿಸಿಐ ಮೆಚ್ಚುಗೆ ವ್ಯಕ್ತಪಡಿಸಿದೆ.

ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಗಳಿಸಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಪಂದ್ಯದ ಒಂದು ಹಂತದಲ್ಲಿ ಸ್ನಾಯು ಸೆಳೆತಕ್ಕೊಳಗಾದರು. ಆ ವೇಳೆ ಕೊಹ್ಲಿ ಅವರು ರೂಟ್ ನೆರವಿಗೆ ಧಾವಿಸಿದರು. ಸುಧಾರಿಸಿಕೊಳ್ಳಲು ನೆರವಾದರು.

ಓದಿ:India vs England|100ನೇ ಟೆಸ್ಟ್ನಲ್ಲಿ ಶತಕ ಬಾರಿಸಿದ ಜೋ ರೂಟ್ ಸ್ಮರಣೀಯ ದಾಖಲೆ

ಕೊಹ್ಲಿ ಅವರು ರೂಟ್ಗೆ ಸುಧಾರಿಸಿಕೊಳ್ಳಲು ನೆರವಾಗಿರುವ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಬಿಸಿಸಿಐ, ಕ್ರಿಕೆಟ್ನಲ್ಲಿ ಕ್ರೀಡಾ ಸ್ಫೂರ್ತಿಯ ಅತ್ಯುತ್ತಮ ಕ್ಷಣ ಎಂದು ಉಲ್ಲೇಖಿಸಿದೆ.

ಪಂದ್ಯದಲ್ಲಿ ರೂಟ್ ಅವರು ಶತಕ ಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ. ಇದರೊಂದಿಗೆ ತಮ್ಮ ನೂರನೇ ಪಂದ್ಯದಲ್ಲಿ ಅವರು ನೂರು ರನ್ ಗಳಿಸಿ ಸಂಭ್ರಮಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.