ಮುಂಬೈ: ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಬಲಗೈ ವೇಗದ ಬೌಲರ್ ಉಮೇಶ್ ಯಾದವ್ ಅವರನ್ನು ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗಾಗಿನ ಟೀಮ್ ಇಂಡಿಯಾದಲ್ಲಿ ಸೇರ್ಪಡೆಗೊಳಿಸಲಾಗಿದೆ.

ಈ ಕುರಿತು ಸೋಮವಾರ ಸಂಜೆ ಬಿಸಿಸಿಐ ಟ್ವೀಟ್ ಮಾಡಿದ್ದು, ಅಂತಿಮ ಎರಡು ಪಂದ್ಯಗಳಿಗೆ ಉಮೇಶ್ ಯಾದವ್ ಆಯ್ಕೆಗೆ ಲಭ್ಯವಿರುತ್ತಾರೆ ಎಂಬುದನ್ನು ತಿಳಿಸಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಅಂತಿಮ ಎರಡು ಟೆಸ್ಟ್ ಪಂದ್ಯಗಳು ಅಹಮದಾಬಾದ್ನ ಮೊಟೇರಾದಲ್ಲಿ ಹೊಸತಾಗಿ ನಿರ್ಮಾಣಗೊಂಡಿರುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಡೆಯಲಿದೆ.

ಈ ನಡುವೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಭಾಗವಹಿಸುವ ಸಲುವಾಗಿ ಶಾರ್ದೂಲ್ ಠಾಕೂರ್ ಅವರನ್ನು ತಂಡದಿಂದ ಬಿಡುಗಡೆಗೊಳಿಸಲಾಗಿದೆ.

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇತ್ತಂಡಗಳು 1-1ರ ಅಂತರದ ಸಮಬಲ ಸಾಧಿಸಿವೆ. ಪಿಂಕ್ ಬಾಲ್ ಟೆಸ್ಟ್ ಪಂದ್ಯವು ಬುಧವಾರದಂದು ಆರಂಭವಾಗಲಿದೆ.

ಇದನ್ನೂ ಓದಿ:ಐಸಿಸಿ ಚಾಂಪಿಯನ್ಷಿಪ್ ಮೇಲೆ ಇಶಾಂತ್ ಕಣ್ಣು

ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗಾಗಿನ ಭಾರತ ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಯಂಕ್ ಅಗರವಾಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ (ಉಪ ನಾಯಕ), ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಉಮೇಶ್ ಯಾದವ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.