ಜೋಹನ್ಸ್ಬರ್ಗ್: ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ 135 ರನ್ಗಳ ಭರ್ಜರಿ ಜಯ ಸಾಧಿಸಿದೆ.

ಶುಕ್ರವಾರ ರಾತ್ರಿ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ಗಳನ್ನು ಪೇರಿಸಿತ್ತು. ಸಂಜು ಸ್ಯಾಮ್ಸನ್(ಅಜೇಯ 109; 56ಎ) ಮತ್ತು ತಿಲಕ್ ವರ್ಮಾ(ಅಜೇಯ 120; 47ಎ) ತಲಾ ಒಂದೊಂದು ಶತಕ ಬಾರಿಸುವ ಮೂಲಕ ತಂಡ ಬೃಹತ್ ಮೊತ್ತ ಗಳಿಸಲು ಸಹಕರಿಸಿದ್ದರು.

ಈ ಗುರಿ ಬೆನ್ನತ್ತಿದ್ದ ಆತೀಥೆಯ ತಂಡ 18 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 148 ರನ್ಗಳಿಸಲಷ್ಟೇ ಶಕ್ತವಾಯಿತು.

ಆ ಮೂಲಕ ಭಾರತ 3–1ರಿಂದ ಸರಣಿ ಗೆದ್ದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.