ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ 5 ವಿಕೆಟ್ ಪಡೆದು ಮಿಂಚಿದ್ದಾರೆ.

ಭಾನುವಾರ ಎರಡನೇ ದಿನದಾಟ ಆರಂಭಿಸಿದ ಶ್ರೀಲಂಕಾ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ 35.5 ಓವರ್ಗಳಲ್ಲಿ 109 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್ನಲ್ಲಿ ಭಾರತ 143ರನ್ಗಳ ಮಹತ್ವದ ಮುನ್ನಡೆ ಗಳಿಸಿದೆ.

ಭಾರತದ ಪರ ಜಸ್ಪ್ರೀತ್ ಬೂಮ್ರಾ 5, ಆರ್. ಅಶ್ವಿನ್ ಹಾಗೂ ಮೊಹಮ್ಮದ್ ಶಮಿ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಸದ್ಯ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ 5 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 10ರನ್ ಗಳಿಸಿದೆ. ಮಯಂಕ್ ಅಗರವಾಲ್, ರೋಹಿತ್ ಶರ್ಮಾ ಕ್ರೀಸ್ನಲ್ಲಿದ್ದಾರೆ.

ಭಾರತ ಶನಿವಾರ ಮೊದಲ ಇನ್ನಿಂಗ್ಸ್ನಲ್ಲಿ 59.1 ಓವರ್ಗಳಲ್ಲಿ 252 ರನ್ ಗಳಿಸಿ ಆಲೌಟ್ ಆಗಿತ್ತು. ಶ್ರೇಯಸ್ ಅಯ್ಯರ್ ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾದರು.

253 ರನ್ ಗುರಿ ಬೆನ್ನತ್ತಿದ್ದ ಶ್ರೀಲಂಕಾ ಮೊದಲ ದಿನದಾಟದ ಅಂತ್ಯಕ್ಕೆ 6 ನಷ್ಟಕ್ಕೆ 86 ರನ್ ಗಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.