ಕಟಕ್: ಭಾರತ ಕ್ರಿಕೆಟ್ ತಂಡದ ಮಧ್ಯಮ ವೇಗದ ಬೌಲರ್ ದಿಪಕ್ ಚಾಹರ್ಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರ ಸ್ಥಾನಕ್ಕೆ ನವದೀಪ್ ಶೈನಿ ಅವರನ್ನು ಆಯ್ಕೆ ಮಾಡಲಾಗಿದೆ.

‘ಹೈದರಾಬಾದ್ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ವೇಳೆ ಚಾಹರ್ಗೆ ಬೆನ್ನು ನೋವು ಕಾಣಿಸಿಕೊಂಡಿತ್ತು’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ‘ತಪಾಸಣೆ ನಡೆಸಿರುವ ಬಿಸಿಸಿಐ ವೈದ್ಯಕೀಯ ತಂಡ, ಸಂಪೂರ್ಣ ಗುಣಮುಖರಾಗಲು ಕೆಲಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದೆ. ಆದ್ದರಿಂದ ಚಾಹರ್ ಮೂರನೇ ಪಂದ್ಯದಿಂದ ಹೊರಗುಳಿಯಲಿದ್ದಾರೆ’ ಎಂದೂ ಉಲ್ಲೇಖಿಸಿದೆ.

ಚಾಹರ್ ಸ್ಥಾನಕ್ಕೆ ಇದುವರೆಗೆ ಒಂದೂ ಏಕದಿನ ಪಂದ್ಯ ಆಡದ ನವದೀಪ್ ಶೈನಿ ಮೂರನೇ ವೇಗದ ಬೌಲರ್ ಆಗಿ ತಂಡ ಕೂಡಿಕೊಳ್ಳಲಿದ್ದಾರೆ. ಇದೇ ವರ್ಷ ಆಗಸ್ಟ್ನಲ್ಲಿ ನಡೆದ ವಿಂಡೀಸ್ ವಿರುದ್ಧದ ಪಂದ್ಯದ ಮೂಲಕ ಟಿ20ಗೆ ಪದಾರ್ಪಣೆ ಮಾಡಿದ್ದ ಶೈನಿ, ಬಳಿಕ ಸೆಪ್ಟೆಂಬರ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧವೂ ಆಡಿದ್ದರು.

ಭಾರತ–ವೆಸ್ಟ್ ಇಂಡೀಸ್ ಏಕದಿನ ಸರಣಿಯ ಮೂರನೇ ಪಂದ್ಯವು ಡಿಸೆಂಬರ್ 22ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.