ಹರಾರೆ: ಆತಿಥೇಯ ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲೂ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಕೆ.ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಭಾರತ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ಕಳೆದ ಪಂದ್ಯದ ಹೀರೊ ದೀಪಕ್ ಚಾಹರ್ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:ಭಾರತ–ಜಿಂಬಾಬ್ವೆ ಎರಡನೇ ಏಕದಿನ ಪಂದ್ಯ: ಸರಣಿ ಕೈವಶದತ್ತ ರಾಹುಲ್ ಬಳಗದ ಚಿತ್ತ

ಮೊದಲ ಏಕದಿನ ಪಂದ್ಯದಲ್ಲಿ ಭಾರತ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ಕಾಯ್ದುಕೊಂಡಿದೆ.

ಮೊದಲ ಪಂದ್ಯದಲ್ಲಿ ದೀಪಕ್ ಚಾಹರ್, ಪ್ರಸಿದ್ಧ ಕೃಷ್ಣ ಹಾಗೂ ಅಕ್ಷರ್ ಪಟೇಲ್ ತಲಾ ಮೂರು ವಿಕೆಟ್ಗಳನ್ನು ಕಬಳಿಸಿದ್ದರು. ಬಳಿಕ ಆರಂಭಿಕ ಜೋಡಿಶಿಖರ್ ಧವನ್ (81*) ಹಾಗೂ ಶುಭಮನ್ ಗಿಲ್ (82*) ಅಜೇಯ ಅರ್ಧಶತಕಗಳನ್ನು ಸಿಡಿಸಿದ್ದರು.

ಏಕದಿನ ಸರಣಿಯ ಎಲ್ಲ ಮೂರು ಪಂದ್ಯಗಳು ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿದೆ. ಭಾರತೀಯ ಕಾಲಮಾನ ಅಪರಾಹ್ನ 12.45ಕ್ಕೆ ಪಂದ್ಯ ಆರಂಭವಾಗಲಿದೆ.

ಇದನ್ನೂ ಓದಿ:IND vs ZIM 1st ODI: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್ಗಳ ಭರ್ಜರಿ ಜಯ

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಇಂತಿದೆ:

ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ದ ಕೃಷ್ಣ ಮತ್ತು ಮೊಹಮ್ಮದ್ ಶಮಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.